HomeKarnatakaನಕಲಿ ಟಿಕೆಟ್ ಸೃಷ್ಟಿಸಿ ಚಾರಣಕ್ಕೆ ಅವಕಾಶ: ಅರಣ್ಯಾಧಿಕಾರಿ ಅಮಾನತು

ನಕಲಿ ಟಿಕೆಟ್ ಸೃಷ್ಟಿಸಿ ಚಾರಣಕ್ಕೆ ಅವಕಾಶ: ಅರಣ್ಯಾಧಿಕಾರಿ ಅಮಾನತು

ಚಿಕ್ಕಮಗಳೂರು: ನಕಲಿ ಟಿಕೆಟ್ ಸೃಷ್ಟಿಸಿ ಚಾರಣಕ್ಕೆ ಅವಕಾಶ ನೀಡಿದ ಆರೋಪದ ಮೇಲೆ ಕೊಪ್ಪ ವಿಭಾಗದ ಕಳಸ ವಲಯದ ಉಪ ವಲಯ ಅರಣ್ಯ ಅಧಿಕಾರಿ ಚಂದನಗೌಡ ದ್ಯಾಮನಗೌಡರ ಅವರನ್ನು ಅರಣ್ಯ ಇಲಾಖೆ ಸೋಮವಾರ ಅಮಾನತು ಮಾಡಿ ಆದೇಶ ಹೊರಡಿಸಿದೆ.

ಮೂಡಿಗೆರೆ ತಾಲೂಕಿನ ರಾಣಿಝರಿ ಪ್ರವಾಸಿ ತಾಣದ ಸಮೀಪದಿಂದ ಬಲ್ಲಾಳ ರಾಯನದುರ್ಗ ಮತ್ತು ಬಂಡಾಜೆ ಜಲಪಾತ ವೀಕ್ಷಣೆಗೆ ಚಾರಣಕ್ಕೆ ತೆರಳಲು ಆನ್ಲೈನ್ ಮೂಲಕ 250ರೂ. ಪಾವತಿಸಿ ಕಾಯ್ದಿರಿಸಲು ಅವಕಾಶವಿದೆ. ಈ ಚಾರಣದ ಉಸ್ತುವಾರಿಯನ್ನು ಅರಣ್ಯ ಇಲಾಖೆ ನಿರ್ವಹಿಸುತ್ತಿದೆ. ಆನ್ಲೈನ್ ಟಿಕೆಟ್ ಮಾದರಿಯಲ್ಲೇ ಟಿಕೆಟ್ ಮುದ್ರಿಸಿ ಚಾರಣಿಗರಿಗೆ ನೀಡಿ ಅವರಿಂದ ಹಣವನ್ನು ಮೋನಿಕಾ ಎಂಬುವರ ಬ್ಯಾಂಕ್ ಖಾತೆಗೆ ಫೋನ್ ಪೇ ಮೂಲಕ ವರ್ಗಾವಣೆ ಮಾಡಿಸಿದ ಆರೋಪ ಚಂದನಗೌಡರ ಮೇಲಿದೆ.

2024ರ ಜೂನ್ ನಲ್ಲಿ ಆನ್ಲೈನ್ ಬುಕಿಂಗ್ ಮಾಡಿರುವ ಪಟ್ಟಿಗೂ ಚಾರಣದ ನೋಂದಣಿ ಪುಸ್ತಕದಲ್ಲಿರುವ ಪಟ್ಟಿಗೂ ತಾಳೆಯಾಗಿಲ್ಲ. ಒಂದು ಬುಕಿಂಗ್ ಐಡಿಯನ್ನು ನಕಲು ಮಾಡಿ ಹತ್ತಕ್ಕೂ ಹೆಚ್ಚು ನಕಲಿ ಟಿಕೆಟ್ ಮುದುರಿಸಿರುವುದು ಈ ಬಗ್ಗೆ ಪರಿಶೀಲನೆ ನಡೆಸಿ ಅಧಿಕಾರಿಗಳು ವರದಿ ಸಲ್ಲಿಸಿದ್ದು, ಇದನ್ನು ಆಧರಿಸಿ ಚಂದನಗೌಡ ಅವರನ್ನು ಅಮಾನತು ಮಾಡಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಉಪೇಂದ್ರ ಪ್ರತಾಪ ಸಿಂಗ್ ಆದೇಶ ಹೊರಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular