ಬೆಂಗಳೂರು : ಗುಂಡು ಸೂಜಿ ಚುಚ್ಚಿ ಸಿಎಂ ಸಿದ್ದರಾಮಯ್ಯ ಕೈಗೆ ಗಾಯಗಳಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಗುಂಡು ಸೂಜಿ ಚುಚ್ಚಿ ಸಿಎಂ ಸಿದ್ದರಾಮಯ್ಯ ಕೈಗೆ ಗಾಯವಾಗಿದ್ದು, ಅವರು ಕರ್ಚೀಪ್ ಕಟ್ಟಿಕೊಂಡು ಬಂದಿದ್ದಾರೆ.
ವಿಧಾನಸೌಧದ ಕೊಠಡಿಯಲ್ಲಿ ಸಿಎಂ ಸಿದ್ದರಾಮಯ್ಯ ಕೈಗೆ ಗುಂಡು ಸೂಚಿ ಚುಚ್ಚಿದ್ದು, ಸಿದ್ದರಾಮಯ್ಯ ಕೈಯಲ್ಲಿ ಆದ ಗಾಯ ಕಂಡು ಅಧಿಕಾರಿಗಳು ತಬ್ಬಿಬ್ಬಾಗಿದ್ದಾರೆ. ನಂತರ ಸಿಎಂ ಕೈಗೆ ಔಷಧಿ ಹಚ್ಚಲಾಯಿತು ಎಂಬುದಾಗಿ ತಿಳಿದು ಬಂದಿದೆ.
ಅರ್ಜಿಯಲ್ಲಿದ್ದ ಗುಂಡು ಸೂಚಿ ಚುಚ್ಚಿ ಗಾಯಗಳಾಗಿದೆ. ಮೊದಲು ಗಾಯದ ಬಗ್ಗೆ ಮಾಹಿತಿ ಇಲ್ಲದೇ ಅಧಿಕಾರಿಗಳು ವೈದ್ಯರು ಶಾಕ್ ಆಗಿ ಸಿಎಂ ಸಿದ್ದರಾಮಯ್ಯಗೆ ಚಿಕಿತ್ಸೆ ನೀಡಲು ಧಾವಿಸಿದ್ದರು. ಆದರೆ ಕೊನೆಗೆ ಇದು ಗುಂಡು ಪಿನ್ನು ಚುಚ್ಚಿದ ಗಾಯ ಎಂಬುದು ತಿಳಿದು ಬಂದಿದೆ.
ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯಯ್ಯ ಗುಡುಗು
‘ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ’’ ಎಂದು ಗೋಳಾಡುತ್ತಿರುವ ರಾಜ್ಯದ ಬಿಜೆಪಿ ನಾಯಕರೇ, ಮಹಿಳಾ ಭಕ್ಷಣೆ ಮತ್ತು ಮಹಿಳಾ ಭಕ್ಷಕರಿಗೆ ರಕ್ಷಣೆ ಕೊಡುವುದನ್ನು ನೀವು ನಿಲ್ಲಿಸಿದರೆ ರಾಜ್ಯದಲ್ಲಿ ಮಹಿಳೆಯರು ಮಾತ್ರವಲ್ಲ ಬಾಲಕಿಯರೂ ಸುರಕ್ಷಿತರಾಗಿರುತ್ತಾರೆ.
ರಾಜ್ಯವೂ ಮಹಿಳೆಯರ ಪಾಲಿಗೆ ಸುರಕ್ಷಿತವಾಗಿರುತ್ತದೆ. ರಾಜ್ಯದಲ್ಲಿರುವ ನಿಮ್ಮ ಪಕ್ಷದ ಒಬ್ಬ ಸರ್ವೊಚ್ಚ ನಾಯಕರು ಪೋಕ್ಸೊ ಕಾಯ್ದೆಯಡಿ ಜೈಲಿಗೆ ಹೋಗುವ ದಾರಿಯಲ್ಲಿದ್ದಾರೆ. ನಿಮ್ಮ ಮಿತ್ರಪಕ್ಷವಾದ ಜೆಡಿ(ಎಸ್) ನ ಮಾಜಿ ಸಂಸದ ನೂರಾರು ಮಹಿಳೆಯರ ಮೇಲಿನ ಅತ್ಯಾಚಾರದ ಪ್ರಕರಣದಲ್ಲಿ ಜೈಲಿನಲ್ಲಿದ್ದಾನೆ, ಶಾಸಕರಾಗಿರುವ ಅವನ ತಂದೆ ಮೇಲೆ ಆರೋಪ ಪಟ್ಟಿ ಸಲ್ಲಿಕೆಯಾಗಿದೆ, ಅದೇ ಕುಟುಂಬದ ಇನ್ನೊಬ್ಬ ಶಾಸಕ ಲೈಂಗಿಕ ದೌರ್ಜನ್ಯದ ಪ್ರಕರಣದಲ್ಲಿ ಆರೋಪಿಯಾಗಿ ಜಾಮೀನಿನ ಮೇಲೆ ಹೊರಗಿದ್ದಾನೆ. ಇಂತಹ ಮಹಿಳಾ ಭಕ್ಷಕರನ್ನು ಕಟ್ಟಿಕೊಂಡು ಮೆರೆಯುತ್ತಿರುವ ನಿಮಗೆ ನಮ್ಮ ಸರ್ಕಾರದ ವಿರುದ್ದ ಆರೋಪ ಮಾಡುವ ಯಾವ ನೈತಿಕತೆ ಇದೆ? ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ.