BIG NEWS: ರಾಜ್ಯದ ನಾಲ್ವರಿಗೆ ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

ಬೆಂಗಳೂರು: ಕೇಂದ್ರ ಶಿಕ್ಷಣ ಸಚಿವಾಲಯ ನೀಡುವ ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ -2024 ಪ್ರಶಸ್ತಿಗೆ ರಾಜ್ಯದ ನಾಲ್ವರು ಶಿಕ್ಷಕರು ಭಾಜನರಾಗಿದ್ದಾರೆ.

ಕೇಂದ್ರ ಶಿಕ್ಷಣ ಮತ್ತು ಸಾಕ್ಷರತಾ ಸಚಿವಾಲಯ 50 ಶಿಕ್ಷಕರನ್ನು ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಗೆ ಆಯ್ಕೆ ಮಾಡಿದ್ದು, ರಾಜ್ಯದ ನಾಲ್ವರಿಗೆ ಪ್ರಶಸ್ತಿ ದೊರೆತಿದೆ. ಬೆಂಗಳೂರಿನ ಸಂಜಯನಗರದ ಡೆಪೋಡಿಲ್ಸ್ ಇಂಗ್ಲಿಷ್ ಶಾಲೆಯ ಹೆಚ್.ಕೆ. ನರಸಿಂಹಮೂರ್ತಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಲ್ಲಸಂದ್ರ ಕಮ್ಮಗೊಂಡನಹಳ್ಳಿ ಕೇಂದ್ರೀಯ ವಿದ್ಯಾಲಯದ ಅಶೋಕ್ ಸೇನ್ ಗುಪ್ತಾ, ಮೈಸೂರು ಜಿಲ್ಲೆ ಹುಣಸೂರಿನ ಸರ್ಕಾರಿ ಪಿಯು ಕಾಲೇಜಿನ ಹೆಚ್.ಎನ್. ಗಿರೀಶ್, ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಸರ್ಕಾರಿ ಶಾಲೆಯ ನಾರಾಯಣಸ್ವಾಮಿ ಅವರಿಗೆ ಪ್ರಶಸ್ತಿ ಲಭಿಸಿದೆ.

ಸೆಪ್ಟಂಬರ್ 5 ರಂದು ದೆಹಲಿಯ ವಿಜ್ಞಾನ ಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಪ್ರಶಸ್ತಿಯು 50,000 ರೂ. ನಗದು, ಬೆಳ್ಳಿ ಪದಕ ಮತ್ತು ಪ್ರಶಸ್ತಿ ಪತ್ರ ಒಳಗೊಂಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read