ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನ ಸೆ.9 ರವರೆಗೆ ವಿಸ್ತರಣೆ ಮಾಡಿ ಕೋರ್ಟ್ ಆದೇಶ ಹೊರಡಿಸಿದೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡಲಾಗಿದ್ದ ಪ್ರಕರಣ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ದರ್ಶನ್ ನನ್ನು ಬೇರೆ ಜೈಲಿಗೆ ಸ್ಥಳಾಂತರ ಮಾಡಲು ಸಿದ್ಧತೆ ನಡೆಸಲಾಗಿದೆ.
ಕೊಲೆ ಆರೋಪಿ ನಟ ದರ್ಶನ್ ಹಾಗೂ ಗ್ಯಾಂಗ್ ನನ್ನು ಬೇರೆ ಬೇರೆ ಜೈಲುಗಳಿಗೆ ಸ್ಥಳಾಂತರ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಹಾಗೂ ಗ್ಯಾಂಗ್ ನ ನ್ಯಾಯಾಂಗ ಬಂಧನ ಅವಧಿ ಇಂದಿಗೆ ಮುಕ್ತಾಯವಾಗಿತ್ತು.ಈ ಹಿನ್ನೆಲೆಯಲ್ಲಿ ಆರೋಪಿಗಳನ್ನು ಇಂದು ಮಧ್ಯಾಹ್ನ ವಿಡಿಯೋ ಕಾನ್ಫರೆನ್ಸ್ ಮೂಲಕ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು.
ವಿಚಾರಣೆ ಬಳಿಕ ನಟ ದರ್ಶನ್ ಗೆ ಮತ್ತೆ ಸೆ. 9 ರವರೆಗೆ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಲಾಗಿದೆ. ಈ ಬಳಿಕ ದರ್ಶನ್ ನನ್ನು ಬಳ್ಳಾರಿ ಸೆಂಟ್ರಲ್ ಜೈಲಿಗೆ ಶಿಫ್ಟ್ ಮಾಡುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಜೈಲಧಿಕಾರಿಗಳು ಹಾಗೂ ಪೊಲೀಸರು ಸಿದ್ಧತೆ ನಡೆಸಿದ್ದಾರೆ.