HomeKarnataka'ಡೆಂಗ್ಯೂ' ನಿಯಂತ್ರಣಕ್ಕೆ ರಾಜ್ಯ ಸರ್ಕಾರದಿಂದ ಮಹತ್ವದ ಕ್ರಮ : ಮನೆ ಮನೆಗೆ 'ಓವಿ ಟ್ರ್ಯಾಪ್' ಸಾಧನ...

‘ಡೆಂಗ್ಯೂ’ ನಿಯಂತ್ರಣಕ್ಕೆ ರಾಜ್ಯ ಸರ್ಕಾರದಿಂದ ಮಹತ್ವದ ಕ್ರಮ : ಮನೆ ಮನೆಗೆ ‘ಓವಿ ಟ್ರ್ಯಾಪ್’ ಸಾಧನ ಅಳವಡಿಕೆ..!

ಡೆಂಘಿ, ಮಲೇರಿಯಾದಂತಹ ಸಾಂಕ್ರಾಮಿಕ ರೋಗ ಹರಡುವ ಈಡಿಸ್ ಸೊಳ್ಳೆಗಳಿಗೆ ಖೆಡ್ಡ ತೋಡಲು ಆರೋಗ್ಯ ಇಲಾಖೆ ಹಾಗೂ ಬಿಬಿಎಂಪಿ ವಿಭಿನ್ನ ಪ್ರಯತ್ನಕ್ಕೆ ಕೈ ಹಾಕಿದೆ. ಸೊಳ್ಳೆಗಳನ್ನು ಆಕರ್ಷಿಸಿ ನಾಶಪಡಿಸುವ ಓವಿ ಟ್ರ್ಯಾಪ್ ಸಾಧನಗಳನ್ನು ಬೆಂಗಳೂರಿನ ಗೋಪಾಲಪುರದಲ್ಲಿ ಅಳವಡಿಸಲಾಗಿದ್ದು, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಚಾಲನೆ ನೀಡಿದ್ದಾರೆ.

ಪ್ರಾಯೋಗಿಕವಾಗಿ ಗೋಪಾಲಪುರದಲ್ಲಿ 120 ಓವಿ ಟ್ರ್ಯಾಪ್ ಸಾಧನಗಳನ್ನು ಮನೆ ಮನೆಗಳಿಗೆ ಅಳವಡಿಸಲಾಗಿದೆ. ಓವಿ ಟ್ರ್ಯಾಪ್ ಬಯೋ ಸಾಧನವಾಗಿದ್ದು, ಈಡಿಸ್ ಸೊಳ್ಳೆಗಳನ್ನು ಆಕರ್ಷಿಸಿ ನಾಶಪಡಿಸುತ್ತದೆ.

ಈ ಬಗ್ಗೆ ಮಾಹಿತಿ ನೀಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಈಡಿಸ್ ಸೊಳ್ಳೆಗಳನ್ನು ನಾಶಪಡಿಸುವ ಬಯೋ ಸಾಧನಗಳನ್ನು ಪ್ರಾಯೋಗಿಕವಾಗಿ ಬಳಕೆ ಮಾಡುತ್ತಿದ್ದೇವೆ. ಓವಿ ಟ್ರ್ಯಾಪ್ ಸಾಧನಗಳಿಂದ ಈಡಿಸ್ ಸೊಳ್ಳೆಗಳ ನಿಯಂತ್ರಣ ಸಾಧ್ಯವಾದರೆ ಡೆಂಘಿ, ಮಲೇರಿಯಾ, ಝೀಕಾದಂತಹ ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಣಕ್ಕೆ ತರಬಹುದು. ಉತ್ತಮ ಫಲಿತಾಂಶ ದೊರೆತರೆ ರಾಜ್ಯದಾದ್ಯಂತ ಓವಿ ಟ್ರ್ಯಾಪ್ ಸಾಧನಗಳನ್ನು ಅಳವಡಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular