HomeKarnatakaಯತ್ನಾಳ್ ಪ್ರತಿಭಟನೆಗೆ ಬಿಜೆಪಿ ನಾಯಕರು ಸಾಥ್: ಮಾಲಿನ್ಯ ನಿಯಂತ್ರಣ ಮಂಡಳಿ ವಿರುದ್ಧ ಕಿಡಿ; ರಾಜಕೀವಾಗಿ ಮುಗಿಸುವ...

ಯತ್ನಾಳ್ ಪ್ರತಿಭಟನೆಗೆ ಬಿಜೆಪಿ ನಾಯಕರು ಸಾಥ್: ಮಾಲಿನ್ಯ ನಿಯಂತ್ರಣ ಮಂಡಳಿ ವಿರುದ್ಧ ಕಿಡಿ; ರಾಜಕೀವಾಗಿ ಮುಗಿಸುವ ಹುನ್ನಾರ ಎಂದು ಬೊಮ್ಮಾಯಿ ಆಕ್ರೋಶ

ಬೆಂಗಳೂರು: ತನ್ನ ಒಡೆತನದ ಸಕ್ಕರೆ ಕಾರ್ಖಾನೆ ಪುನರಾರಂಭಕ್ಕೆ ಅನುಮತಿ ನಿರಾಕರಿಸಿರುವ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವಿರುದ್ಧ ಧರಣಿ ನಡೆಸುತ್ತಿರುವ ಶಾಸಕ ಬಸನಗೌಡ ಪಟೀಲ್ ಯತ್ನಾಳ್ ಗೆ ಬಿಜೆಪಿ ನಾಯಕರು ಬೆಂಬಲ ನೀಡಿದ್ದಾರೆ.

ಯತ್ನಾಳ್ ನಡೆಸುತ್ತಿದ್ದ ಪ್ರತಿಭಟನೆಯಲ್ಲಿ ವಿಪಕ್ಷ ನಾಯಕ ಆರ್.ಅಶೋಕ್, ಸಂಸದ ಬಸವರಾಜ್ ಬೊಮ್ಮಾಯಿ, ಸಿ.ಟಿ.ರವಿ ಸೇರಿದಂತೆ ಹಲವು ನಾಯಕರು ಸಾಥ್ ನೀಡಿದ್ದಾರೆ.

ಈ ವೇಳೆ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಸರ್ಕಾರದ ವಿರುದ್ಧ ಕಿಡಿಕಾರಿದ ಸಂಸದ ಬಸವರಾಜ್ ಬೊಮ್ಮಾಯಿ, ಇದು ಯತ್ನಾಳ್ ಅವರನ್ನು ರಾಜಕೀಯವಾಗಿ ಮುಗಿಸುವ ಯತ್ನ ಎಂದು ಆರೋಪಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದಲ್ಲಿ ಕಾನೂನು, ನ್ಯಾಯ ಸತ್ತು ಹೋಗಿದೆ, ದ್ವೇಷದ ರಾಜಕಾರಣ ನಡೆಯುತ್ತಿದೆ‌. ಎಲ್ಲವೂ ಕಾನೂನು ಪ್ರಕಾರ ಮಾಡಿ ಯತ್ನಾಳ್ ಅವರು ಸಕ್ಕರೆ ಕಾರ್ಖಾನೆ ಆರಂಭ ಮಾಡಿದ್ದಾರೆ. ಆದರೆ, ಕಳೆದ ವರ್ಷ ಇವರಿಗೆ ಮಾಲಿನ್ಯ ನಿಯಂತ್ರಣ ಮಂಡಳಿ ಕಾರ್ಖಾನೆಗೆ ಅನುಮತಿ ಕೊಡಲಿಲ್ಲ. ಆಗ ಇವರು ಕೋರ್ಟ್ ಮೊರೆ ಹೋದರು, ಕೋರ್ಟ್ ನಾಲ್ಕು ವಾರದೊಳಗೆ ಕಾರ್ಖಾನೆ ಪುನಾರಂಭಕ್ಕೆ ಆದೇಶ ಕೊಟ್ಟಿತು. ಆದರೆ, ಮಾಲಿನ್ಯ ನಿಯಂತ್ರಣ ಮಂಡಳಿಯವರು ತಾಂತ್ರಿಕ ಕಾರಣದ ನೆಪ ಹೆಳುತ್ತಿದ್ದಾರೆ. ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ರಾಜಕೀಯವಾಗಿ ಮುಗಿಸಬೇಕು ಅಂತ ಅನುಮತಿ ಕೊಡುತ್ತಿಲ್ಲ ಎಂದು ವಾಗ್ದಾಳಿ ನದೆಸಿದರು.

ಮಾಲಿನ್ಯ ನಿಯಂತ್ರಣ ಮಂಡಳಿ ಬಹಳ ದೊಡ್ಡ ತಾರತಮ್ಯ ಮಾಡುತ್ತಿದೆ. ಹಲವು ಸಕ್ಕರೆ ಕಾರ್ಖಾನೆಗಳಿಗೆ ಅನುಮತಿ ಕೊಟ್ಟು, ಇವರಿಗೆ ತಾರತಮ್ಯ ಮಾಡಲಾಗುತ್ತಿದೆ. ಪಿಸಿಬಿ ಕಾನೂನು ಉಲ್ಲಂಘಿಸಿದ ಕಾರ್ಖಾನೆಗಳಿಗೆ ಅನುಮತಿ ಕೊಟ್ಟಿದೆ ಇದನ್ನು ಸಹಿಸಲು ಸಾಧ್ಯವಿಲ್ಲ ಎಂದು ಗುಡುಗಿದರು.

For Latest News Updates, Join Our Whatsapp Community🚩
RELATED ARTICLES

Most Popular