ಮದ್ಯ ಸೇವಿಸಿ ವಾಹನ ಚಾಲನೆ: ಕಾರ್ ಚಾಲಕನಿಗೆ 10 ಸಾವಿರ ರೂ. ದಂಡ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಬಳಿ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿದ ಕಾರ್ ಚಾಲಕನಿಗೆ ನ್ಯಾಯಾಲಯ 10 ಸಾವಿರ ರೂಪಾಯಿ ದಂಡ ವಿಧಿಸಿದೆ.

ಆಗುಂಬೆ ಠಾಣೆಯ ಸಬ್ ಇನ್ಸ್ ಪೆಕ್ಟರ್ ರಂಗನಾಥ್ ಅಂತರಗಟ್ಟೆ ಮತ್ತು ತಂಡದವರಿಂದ ವಾಹನಗಳ ತಪಾಸಣೆ ವೇಳೆ ಮಹೇಶ್ ಎಂಬಾತ ಮದ್ಯಪಾನ ಮಾಡಿ ಕಾರ್ ಚಾಲನೆ ಮಾಡಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಈ ಬಗ್ಗೆ ನ್ಯಾಯಾಲಯಕ್ಕೆ ವರದಿ ಮಾಡಿದ್ದ ಹಿನ್ನೆಲೆಯಲ್ಲಿ ಆಗಸ್ಟ್ 27ರಂದು ಪ್ರಥಮ ದರ್ಜೆ ವ್ಯವಹಾರಗಳ ನ್ಯಾಯಾಲಯ ಮತ್ತು ತೀರ್ಥಹಳ್ಳಿ ಜೆಎಂಎಫ್ಸಿ ನ್ಯಾಯಾಧೀಶರು 10 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read