alex Certify ರಾಜ್ಯ ಸರ್ಕಾರದಿಂದ ವಿವಿಧ ಸಮುದಾಯಗಳಿಗೆ ಗುಡ್ ನ್ಯೂಸ್ : ‘ಸಾಲ ಸೌಲಭ್ಯ’ ಪಡೆಯಲು ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯ ಸರ್ಕಾರದಿಂದ ವಿವಿಧ ಸಮುದಾಯಗಳಿಗೆ ಗುಡ್ ನ್ಯೂಸ್ : ‘ಸಾಲ ಸೌಲಭ್ಯ’ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ವತಿಯಿಂದ 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ವಿವಿಧ ನಿಗಮಗಳಾದ ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ಸವಿತಾ-ಸಮಾಜ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ಅಲೆಮಾರಿ-ಅರೆಮಾರಿ ಅಭಿವೃದ್ಧಿ ನಿಗಮ (ನಿ)., ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ಕಾಡುಗೊಲ್ಲ ಅಭಿವೃದ್ಧಿ ನಿಗಮ (ನಿ) ಗಳಲ್ಲಿ ವಿವಿಧ ಯೋಜನೆಯಡಿಯಲ್ಲಿ ಸಾಲ ಮತ್ತು ಸಹಾಯಧನ ಸೌಲಭ್ಯ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಸೇವಾ ಸಿಂಧು ತಂತ್ರಾಂಶದಲ್ಲಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ವಿವಿಧ ಯೋಜನೆಗಳಾದ ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ/ ಕಾಯಕ ಕಿರಣ/ಶಹಾಜೀರಾಜೆ ಸಮೃದ್ಧಿ ಯೋಜನೆ., ಗಂಗಾ ಕಲ್ಯಾಣ ನೀರಾವರಿ ಯೋಜನೆ/ ಜೀವಜಲ/ ಜೀಜಾವು ಜಲಭಾಗ್ಯ ಯೋಜನೆ., ಅರಿವು –ಶೈಕ್ಷಣಿಕ ಸಾಲ ಯೋಜನೆ., ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ., ಸ್ವಾವಲಂಬಿ ಸಾರಥಿ ಯೋಜನೆ., ಸ್ವಯಂ ಉದ್ಯೋಗಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ)., ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆಗೆ ವೆಬ್ ಸೈಟ್ https://www.kaushalkar.com ನಲ್ಲಿ ಅರ್ಜಿ ಸಲ್ಲಿಸಬಹುದು. ಹೊಲಿಗೆ ಯಂತ್ರ ವಿತರಣೆ ಯೋಜನೆ ( ದೇವರಾಜ ಅರಸು ನಿಗಮದ ವ್ಯಾಪ್ತಿಗೆ ಒಳಪಡುವ ಸಮುದಾಯದವರಿಗೆ)., ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು ಯೋಜನೆ (ವಿಶ್ವrಕರ್ಮ ಸಮುದಾಯದವರಿಗೆ ಮಾತ್ರ)., ಭೋಜನಾಲಯ ಕೇಂದ್ರ (ವೀರಶೈವ-ಲಿಂಗಾಯತ ಸಮುದಾಯದವರಿಗೆ)., ವಿಭೂತಿ ನಿರ್ಮಾಣ ಘಟಕ (ವೀರಶೈವ-ಲಿಂಗಾಯತ ಸಮುದಾಯದವರಿಗೆ). ಮತ್ತು ಮರಾಠ ಮಿಲ್ಟ್ರಿ ಹೋಟೆಲ್ ಯೋಜನೆ (ಮರಾಠ ಸಾಮುದಾಯದವರಿಗೆ)ಗಳ ಸಾಲ ಸೌಲಭ್ಯ ಪಡೆಯಬಹುದು.

ಆಸಕ್ತರು ಅರ್ಜಿಗಳನ್ನು ಸೇವಾ ಸಿಂಧು ತಂತ್ರಾಂಶದಲ್ಲಿ ಆಗಸ್ಟ್ 31ರೊಳಗೆ ಸಲ್ಲಿಸಬಹುದು. 2023-24ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೇ ಇರುವ ಫಲಾಪೇಕ್ಷಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾ,ಪಕರ ಕಚೇರಿ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತ, ನಂ.123/1037, 1ನೇ ಮಹಡಿ, 20ನೇ ಮುಖ್ಯ ರಸ್ತೆ, 5ನೇ ಬ್ಲಾಕ್, ವೆಸ್ಟ್ ಆಫ್ ಕಾರ್ಡ್ ರೋಡ್, ರಾಜಾಜಿನಗರ, ಬೆಂಗಳೂರು ನಗರ ಜಿಲ್ಲೆ -560 010 ಅಥವಾ ನಿಗಮದ ಜಿಲ್ಲಾ ಕಛೇರಿಯ ಸಹಾಯವಾಣಿ ಸಂಖ್ಯೆ: 080-23156066 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ದಕ್ಷಿಣ ಜಿಲ್ಲೆ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತದ ಜಿಲ್ಲಾ ವ್ಯವಸ್ಥಾಸಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...
Tipy a triky pro domácnost, vaření a zahradničení - najděte užitečné rady a nápady pro perfektní domovské prostředí. Rozšiřte své kulinářské dovednosti s našimi recepty a objevte tajemství úspěšného zahradničení pro bohatou úrodu. Buďte inspirací pro svůj život s našimi užitečnými články! 5 tipů od výživového poradce pro Jaké potraviny mohou zhoršovat depresi a Jaké ovoce byste Odborník na Neuvěřitelné výhody černého rybízu: Neočekávané Jak omezit konzumaci sladkostí: účinné tipy Co je to „pravidlo talíře“ a Jak proměnit obyčejnou kávu Co je to bramborové mléko: jak Získat tipy, triky a užitečné články o vaření, zahradničení a životním stylu! Naše stránka je plná inspirace pro každodenní život, takže se neváhejte podívat a najít si něco, co vám zpříjemní den. Buďte produktivnější v kuchyni, naučte se nové triky pro zahradničení nebo si přečtěte zajímavé články o tom, jak vést zdravý životní styl - všechno na jednom místě! Jsme tu pro vás, abychom vám poskytli ty nejlepší rady a informace, které vám mohou změnit život k lepšímu. Tak neváhejte a začněte prozkoumávat naši stránku ještě dnes!