HomeKarnatakaBIG NEWS: ರೇಣುಕಾಸ್ವಾಮಿ ಹತ್ಯೆ ಕೇಸ್: ದರ್ಶನ್ ಸೇರಿ 8-10 ಆರೋಪಿಗಳು ಬೇರೆ ಬೇರೆ ಜೈಲಿಗೆ...

BIG NEWS: ರೇಣುಕಾಸ್ವಾಮಿ ಹತ್ಯೆ ಕೇಸ್: ದರ್ಶನ್ ಸೇರಿ 8-10 ಆರೋಪಿಗಳು ಬೇರೆ ಬೇರೆ ಜೈಲಿಗೆ ಶಿಫ್ಟ್: ಗೃಹ ಸಚಿವ ಪರಮೇಶ್ವರ್ ಮಾಹಿತಿ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್ ಹಾಗೂ ಗ್ಯಾಂಗ್ ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಪ್ರಕರಣ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ದರ್ಶನ್ ಸೇರಿದಂತೆ ಹಲವು ಆರೋಪಿಗಳನ್ನು ರಾಜ್ಯದ ಬೇರೆ ಬೇರೆ ಜೈಲುಗಳಿಗೆ ಸ್ಥಳಂತರಿಸಲಾಗಿದೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಕೊಲೆ ಆರೋಪಿ ನಟ ದರ್ಶನ್ ನನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಪ್ರಕರಣದ 8-10 ಆರೋಪಿಗಳನ್ನು ಬೇರೆ ಬೇರೆ ಜೈಲಿಗೆ ಸ್ಥಳಾಂತರಿಸಲಾಗಿದೆ. ಒಬ್ಬೊಬ್ಬರನ್ನು ಒಂದೊಂದು ಜೈಲಿಗೆ ಶಿಫ್ಟ್ ಮಾಡಲಾಗಿದೆ ಎಂದರು.

ಯಾರನ್ನು ಯಾವ ಜೈಲಿಗೆ ಕಳುಹಿಸಬೇಕು ಎಂಬ ಬಗ್ಗೆ ಪೊಲೀಸರೇ ನಿರ್ಧಾರ ಮಾಡಿದ್ದಾರೆ. ಜೈಲಿನ ನಿಯಮದಂತೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular