HomeEntertainmentಶಿವಮೊಗ್ಗದಲ್ಲಿ 'ಕೃಷ್ಣಂ ಪ್ರಣಯ ಸಖಿ' ಚಿತ್ರ ವೀಕ್ಷಣೆ ಮಾಡಿದ ಶರಣ್ಯಾ ಶೆಟ್ಟಿ

ಶಿವಮೊಗ್ಗದಲ್ಲಿ ‘ಕೃಷ್ಣಂ ಪ್ರಣಯ ಸಖಿ’ ಚಿತ್ರ ವೀಕ್ಷಣೆ ಮಾಡಿದ ಶರಣ್ಯಾ ಶೆಟ್ಟಿ

ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ‘ಕೃಷ್ಣಂ ಪ್ರಣಯ ಸಖಿ’ ಚಿತ್ರ  ಅಂದುಕೊಂಡಂತೆ ಸೂಪರ್ ಡೂಪರ್ ಹಿಟ್ ಆಗಿದ್ದು, ರಾಜ್ಯದೆಲ್ಲೆಡೆ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಇದರ ಹಾಡುಗಳು ಸಾಮಾಜಿಕ ಜಾಲತಾಣದಲ್ಲಿ ಹೊಸ ದಾಖಲೆ ಬರೆದಿದ್ದು, ಫ್ಯಾಮಿಲಿ ಸಮೇತ ಬಂದು ಈ ಸಿನಿಮಾ ವೀಕ್ಷಣೆ ಮಾಡುತ್ತಿದ್ದಾರೆ. ‘ಕೃಷ್ಣಂ ಪ್ರಣಯ ಸಖಿ’ ಯ ಮತ್ತೊಬ್ಬ ನಾಯಕಿಯಾದ ನಟಿ ಶರಣ್ಯಾ ಶೆಟ್ಟಿ ಇಂದು ಶಿವಮೊಗ್ಗಕ್ಕೆ ಧಾವಿಸಿದ್ದು, ಪ್ರೇಕ್ಷಕರೊಂದಿಗೆ ಚಿತ್ರವನ್ನು ವೀಕ್ಷಣೆ ಮಾಡುವ ಮೂಲಕ ಸಂಭ್ರಮಿಸಿದ್ದಾರೆ. ಈ ವಿಡಿಯೋವನ್ನು ಶರಣ್ಯ ಶೆಟ್ಟಿ, ನಮ್ಮ instagram ಖಾತೆಯಲ್ಲಿ ಅಪ್ಲೋಡ್ ಮಾಡಿದ್ದಾರೆ.

ಶ್ರೀನಿವಾಸ್ ರಾಜು ನಿರ್ದೇಶನದ ಈ ಚಿತ್ರದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್, ಮಾಳ್ವಿಕಾ ನಾಯರ್, ಮತ್ತು ಶರಣ್ಯಾ ಶೆಟ್ಟಿ ಪ್ರಮುಖ ಪಾತ್ರದಲ್ಲಿದ್ದು, ತ್ರಿಶೂಲ್ ಎಂಟರ್ಟೈನ್ಮೆಂಟ್ ಬ್ಯಾನರ್ ನಲ್ಲಿ ಪ್ರಶಾಂತ್ ಜೀ ರುದ್ರಪ್ಪ ನಿರ್ಮಾಣ ಮಾಡಿದ್ದಾರೆ. ಅರ್ಜುನ್ ಜನ್ಯ ಸಂಗೀತ ಸಂಯೋಜನೆ ನೀಡಿದ್ದು, ಕೆ ಎಂ ಪ್ರಕಾಶ್ ಸಂಕಲನ, ವಿಜಯ್ ಈಶ್ವರ್ ಸಂಭಾಷಣೆ, ವೆಂಕಟರಾಂಪ್ರಸಾದ್ ಛಾಯಾಗ್ರಹಣವಿದೆ.

For Latest News Updates, Join Our Whatsapp Community🚩
RELATED ARTICLES

Most Popular