ಬಳ್ಳಾರಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಬಳ್ಳಾರಿ ಜಿಲ್ಲೆಗೆ ಶಿಫ್ಟ್ ಆಗಿದ್ದು, ಬಿಗಿ ಭದ್ರತೆ ವಹಿಸಲಾಗಿದೆ.
ನಟ ದರ್ಶನ್ ಭೇಟಿಗೆ ಎಲ್ಲರಿಗೂ ಅವಕಾಶ ನೀಡದಂತೆ ಡಿಐಜಿ ಖಡಕ್ ಆದೇಶ ಹೊರಡಿಸಿದ್ದಾರೆ. ದರ್ಶನ್ ವಕೀಲ, ದರ್ಶನ್ ಪತ್ನಿ ಹಾಗೂ ರಕ್ತಸಂಬಂಧಿಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಸಿನಿಮಾ ನಟರು, ರಾಜಕೀಯ ವ್ಯಕ್ತಿಗಳು. ಅಭಿಮಾನಿಗಳಿಗೆ ಪ್ರವೇಶ ನಿರ್ಬಂಧಿಸಲಾಗಿದೆ.
ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಗೆ ರಾಜಾತಿಥ್ಯ ನೀಡಿದ್ದ ಪ್ರಕರಣ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್ ನ ಆರೋಪಿಗಳನ್ನು ಬೇರೆ ಬೇರೆ ಜೈಲಿಗೆ ಸ್ಥಳಾಂತರಿಸಲಾಗಿದೆ. ಇಂದು ಬೆಳಿಗ್ಗೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ನಟ ದರ್ಶನ್ ನನ್ನು ಪೊಲೀಸ್ ಭದ್ರತೆಯಲ್ಲಿ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಯಿತು.