alex Certify ಆಸ್ತಿ ಖರೀದಿ, ಮಾರಾಟಗಾರರಿಗೆ ಗುಡ್ ನ್ಯೂಸ್ : ಸೆ. 2 ರಿಂದ ರಾಜ್ಯದಲ್ಲಿ ‘ಎನಿವೇರ್ ನೋಂದಣಿ’ ವ್ಯವಸ್ಥೆ ಜಾರಿ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಸ್ತಿ ಖರೀದಿ, ಮಾರಾಟಗಾರರಿಗೆ ಗುಡ್ ನ್ಯೂಸ್ : ಸೆ. 2 ರಿಂದ ರಾಜ್ಯದಲ್ಲಿ ‘ಎನಿವೇರ್ ನೋಂದಣಿ’ ವ್ಯವಸ್ಥೆ ಜಾರಿ.!

ಸೆ.02 ರಿಂದ ಎನಿವೇರ್ ನೋಂದಣಿ ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತಿದೆ. ಇದರ ಅಡಿ ಸಾರ್ವಜನಿಕರು ದಸ್ತಾವೇಜನ್ನು ಸ್ಥಿರಾಸ್ತಿ ಇರುವ ಜಿಲ್ಲೆಯ ಯಾವುದಾದರೂ ಉಪನೋಂದಣಿ ಕಚೇರಿಯಲ್ಲಿ ನೋಂದಣಿ ಮಾಡಬಹುದಾಗಿದ್ದು ಸಾರ್ವಜನಿಕರು ಈ ನೂತನ ವ್ಯವಸ್ಥೆಯನ್ನು ಸದುಪಯೋಗಪಡಿಸಿಕೊಳ್ಳಬಹುದು.

2024-25ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಎನಿವೇರ್ ನೋಂದಣಿ ವ್ಯವಸ್ಥೆಯನ್ನು ರಾಜ್ಯ ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸಲಾಗುವುದೆಂದು ಸರ್ಕಾರದಿಂದ ಘೋಷಿಸಲಾಗಿರುದ್ದು, ಈ ವ್ಯವಸ್ಥೆಯನ್ನು ಬೆಂಗಳೂರು ನಗರ ಜಿಲ್ಲೆಯಲ್ಲಿ 20211 ರಲ್ಲಿ, ತುಮಕುರು ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ 2024 ರ ಮಾರ್ಚ್ನಲ್ಲಿ ನೋಂದಣಿ ಕಾಯ್ದೆ 1908 ರ ಕಲಂ(5) ಹಾಗೂ ಕಲಂ (6) ರಡಿಯಲ್ಲಿ ಅನುಷ್ಟಾನಗೊಳಿಸಲಾಗಿರುತ್ತದೆ.
ಎನಿವೇರ್ ನೋಂದಣಿ ವ್ಯವಸ್ಥೆಯು ಈ ಜಿಲ್ಲೆಗಳಲ್ಲಿ ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿದೆ. ಈ ಕಾರಣದಿಂದಾಗಿ ಎನಿವೇರ್ ನೋಂದಣಿಯನ್ನು ಶಿವಮೊಗ್ಗ ಜಿಲ್ಲೆಯ ಉಪನೋಂದಣಿ ಕಚೇರಿಗಳಿಗೂ ವಿಸ್ತರಿಸಲು ನಿರ್ಧರಿಸಲಾಗಿದೆ.

ಪ್ರಸ್ತುತ ಸಾರ್ವಜನಿಕರು ಸ್ಥಿರಾಸ್ತಿ ಇರುವ ವ್ಯಾಪ್ತಿಯ ಉಪ ನೋಂದಣಿ ಕಚೇರಿಯಲ್ಲಿ ಮಾತ್ರ ದಸ್ತಾವೇಜನ್ನ ನೋಂದಣಿ ಮಾಡಲು ಅವಕಾಶವಿದೆ. ಆದರೆ ಎನಿವೇರ್ ನೋಂದಣಿಯಲ್ಲಿ ದಸ್ತಾವೇಜನ್ನು ಸ್ಥಿರಾಸ್ತಿ ಇರುವ ಜಿಲ್ಲೆಯ ಯಾವುದಾದರೂ ಉಪನೋಂದಣಿ ಕಚೇರಿಯಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ.
ಎನಿವೇರ್ ನೋಂದಣಿ ವ್ಯವಸ್ಥೆಯು ಸಾರ್ವಜನಿಕರಿಗೆ ಹಲವಾರು ರೀತಿಯಲ್ಲಿ ಉಪಯುಕ್ತವಾಗಿದ್ದು, ದಸ್ತಾವೇಜಿನ ನೋಂದಣಿಯ್ಲಿ ಪಾರದರ್ಶಕತೆಯನ್ನು ಹೆಚ್ಚಿಸುತ್ತದೆ. ನೋಂದಣಿಯಲ್ಲಿ ವಿಳಂಬವನ್ನು ತಡೆಗಟ್ಟುತ್ತದೆ. ಸಾರ್ವಜನಿಕರು ಸಮೀಪದಲ್ಲಿರುವ ಉಪ ನೋಂದಣಿ ಕಚೇರಿಯಲ್ಲಿ ದಸ್ತಾವೇಜನ್ನು ನೋಂದಾಯಿಸಬಹುದು. ನೋಂದಣಿ ಪ್ರಕ್ತಿಯೆ ಸುಲಭವಾಗುವುದಲ್ಲದೆ ಸಮಯವೂ ಸಹ ಉಳಿಯುತ್ತದೆ. ಉಪ ನೋಂದಣಿ ಕಚೇರಿಗಳಲ್ಲಿ ಜನದಟ್ಟಣೆ ಕಡಿಮೆಯಾಗುತ್ತದೆ, ಕಚೇರಿ ಸಿಬ್ಬಂದಿಗಳ ಮೇಲೆ ಕೆಲಸದ ಒತ್ತಡ ಕಡಿಮೆಯಾಗುತ್ತದೆ ಹಾಗೂ ಕಚೇರಿಗಳಲ್ಲಿ ನೋಂದಣಿ ಕೆಲಸ ಸಮಾನವಾಗಿ ಹಂಚಿಕೆಯಾಗುತ್ತದೆ.

ಆದ್ದರಿಂದ ಸಾರ್ವಜನಿಕರು ಎನಿವೇರ್ ನೋಂದಣಿಯ ಸದುಪಯೋಗಪಡಿಸಿಕೊಂಡು ತಮಗೆ ಹತ್ತಿರದ ಅಥವಾ ನೋಂದಣಿ ಸ್ಲಾಟ್ ಲಭ್ಯವಿರುವಂತಹ ಕಚೇರಿ ಆಯ್ಕೆ ಮಾಡಿಕೊಂಡು ದಸ್ತಾವೇಜನ್ನು ನೋಂದಾಯಿಸಿಕೊಳ್ಳಬಹುದೆಂದು ಜಿಲ್ಲಾ ನೋಂದಣಾಧಿಕಾರಿಗಳು ತಿಳಿಸಿದ್ದಾರೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...