‘ಉಪಾಧ್ಯಕ್ಷ’ ಖ್ಯಾತಿಯ ನಟಿ ಮಲೈಕಾ ವಾಸುಪಾಲ್ ಸಾಮಾಜಿಕ ಜಾಲತಾಣದಲ್ಲಿ ದಿನಕ್ಕೊಂದು ಫೋಟೋ ಅಪ್ಲೋಡ್ ಮಾಡುವ ಮೂಲಕ ನೆಟ್ಟಿಗರೊಂದಿಗೆ ಸದಾ ಸಂಪರ್ಕದಲ್ಲಿದ್ದಾರೆ. ಮಲೈಕಾ ವಾಸುಪಾಲ್ ಇತ್ತೀಚಿಗಷ್ಟೇ ಸೀರೆಯನ್ನುಟ್ಟು ಫೋಟೋಶೂಟ್ ಮಾಡಿಸಿದ್ದು, ಈ ಫೋಟೋಗಳನ್ನು ಒಂದೊಂದಾಗಿ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಿದ್ದಾರೆ. ನಟಿ ಮಲೈಕಾ ವಾಸುಪಾಲ್ ಯುವರಾಣಿಯಂತೆ ಕಂಗೊಳಿಸಿದ್ದು, ಈ ಫೋಟೋಗಳಿಗೆ ನೆಟ್ಟಿಗರು ಫಿದಾ ಆಗಿದ್ದಾರೆ.
ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಹಿಟ್ಲರ್ ಕಲ್ಯಾಣ’ ಧಾರಾವಾಹಿಯಲ್ಲಿ ಲೀಲಾ ಪಾತ್ರದ ಮೂಲಕವೇ ಎಲ್ಲರ ಗಮನ ಸೆಳೆದಿದ್ದ ನಟಿ ಮಲೈಕಾ ವಾಸುಪಾಲ್ ಚಿಕ್ಕಣ್ಣ ನಟನೆಯ ‘ಉಪಾಧ್ಯಕ್ಷ’ ಚಿತ್ರದಲ್ಲಿ ನಾಯಕಿಯಾಗಿ ಅಭಿನಯಿಸುವ ಮೂಲಕ ಬೆಳ್ಳಿ ತೆರೆಗೆ ಪಾದಾರ್ಪಣೆ ಮಾಡಿದರು. ಮೊದಲ ಚಿತ್ರದಲ್ಲೇ ಭರ್ಜರಿ ಯಶಸ್ಸು ಕಂಡ ಇವರಿಗೆ ಇತ್ತೀಚೆಗೆ ಸಾಲು ಸಾಲು ಸಿನಿಮಾಗಳು ಕೈಬೀಸಿ ಕರೆಯುತ್ತಿವೆ.