BREAKING: ಬೆಂಗಳೂರಲ್ಲಿ ಶಾಲೆಗೆ ಬಾಂಬ್ ಬೆದರಿಕೆ ಇ -ಮೇಲ್

ಬೆಂಗಳೂರು: ಬೆಂಗಳೂರಿನಲ್ಲಿ ಶಾಲೆಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. ಬೆಂಗಳೂರಿನ ಗೋವಿಂದಪುರ ಠಾಣಾ ವ್ಯಾಪ್ತಿಯ ಇಂಡಿಯನ್ ಪಬ್ಲಿಕ್ ಸ್ಕೂಲ್ ಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದ್ದು, ಪರಿಶೀಲನೆ ನಡೆಸಲಾಗಿದೆ.

ಬೆಳಗ್ಗೆ 6:57ರ ಸುಮಾರಿಗೆ ಬೆದರಿಕೆ ಇ-ಮೇಲ್ ಬಂದಿದೆ. ಶಾಲೆ ಆವರಣದಲ್ಲಿ ಬಾಂಬ್ ಇಡಲಾಗಿದೆ. ಮಧ್ಯಾಹ್ನ 1:30ಕ್ಕೆ ಬಾಂಬ್ ಬ್ಲಾಸ್ಟ್ ಆಗುತ್ತದೆ ಎಂದು ಮೇಲ್ ಮಾಡಲಾಗಿದೆ. ಮಾಹಿತಿ ಬಂದ ಕೂಡಲೇ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ. ಗೋವಿಂದಪುರ ಪೊಲೀಸರು ಮತ್ತು ಬಾಂಬ್ ಸ್ಕ್ವಾಡ್ ಪರಿಶೀಲನೆ ನಡೆಸಿದ್ದು, ಈ ವೇಳೆ ಯಾವುದೇ ರೀತಿಯ ಬಾಂಬ್ ಪತ್ತೆಯಾಗಿಲ್ಲ. ಈ ಕುರಿತು ಗೋವಿಂದಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read