ದಾವಣಗೆರೆ : ಕಲುಷಿತ ನೀರು ಸೇವಿಸಿ 25 ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾದ ಘಟನೆ ದಾವಣಗೆರೆ ಜಿಲ್ಲೆಯ ಜೋಳದಾಳ ಗ್ರಾಮದಲ್ಲಿ ನಡೆದಿದೆ.
ಗ್ರಾಮಕ್ಕೆ ಸರಬರಾಜು ಆಗುವ ನೀರು ಕಲುಷಿತಗೊಂಡು ಅದನ್ನು ಸೇವಿಸಿ 25 ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಅಸ್ವಸ್ಥಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.