ಬೆಳಗಾವಿ: ಬೆಳಗಾವಿ ಜಿಲ್ಲೆಯ ಕಿತ್ತೂರು ಪಟ್ಟಣ ಪಂಚಾಯಿತಿ ಬಿಜೆಪಿ ಸದಸ್ಯ ನಾಗರಾಜ್ ಅಸುಂಡಿ ಕಿಡ್ನ್ಯಾಪ್ ಆಗಿರುವ ಘಟನೆ ಬೆಳಕಿಗೆ ಬಂದಿದೆ.
ಬೆಳಗಾವಿ ಜಿಲ್ಲೆಯ ಕಿತ್ತೂರು ಪಟ್ಟಣದ ಚೌಕಿಮಠದ ಕ್ರಾಸ್ ಬಳಿ ದುಷ್ಕರ್ಮಿಗಳು ನಾಗರಾಜ್ ಅಸುಂಡಿ ಅವರನ್ನು ಅಪಹರಿಸಿದ್ದಾರೆ ಎಂದು ಅವರ ತಂದೆ ಬಸವರಾಜ್ ದೂರು ನೀಡಿದ್ದಾರೆ.
ಕಿತ್ತೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಘಟನಾ ಸ್ಥಳಕ್ಕೆ ಪೊಲಿಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.
ಸೆಪ್ಟೆಂಬರ್ 3ರಂದು ಕಿತ್ತೂರು ಪಟ್ಟಣ ಪಂಚಾಯಿತಿ ಚುನಾವಣೆ ನಡೆಯುತ್ತಿದ್ದು, ಬಿಜೆಪಿ 9, ಕಾಂಗ್ರೆಸ್ ಹಾಗೂ ಇತರರು 9 ಸದಸ್ಯರ ಸಂಖ್ಯಾಬಲ ಇದೆ. ಹೀಗಾಗಿ ಸಂಖ್ಯಾ ಬಲ ಹೆಚ್ಚಿಸಿಕೊಳ್ಳಲು ಕಾಂಗ್ರೆಸ್ ಪಕ್ಷದವರೇ ತಮ್ಮ ಪಕ್ಷದ ಸದಸ್ಯನನ್ನು ಕಿಡ್ನ್ಯಾಪ್ ಮಾಡಿಸಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.