ಇತ್ತೀಚಿಗಷ್ಟೇ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರದ ಮೂಲಕ ಎಲ್ಲರ ಗಮನ ಸೆಳೆದಿದ್ದ ಚಂದನ್ ಶೆಟ್ಟಿ ಇದೀಗ ಮತ್ತೊಂದು ಸಿನಿಮಾದಲ್ಲಿ ಅಭಿನಯಿಸುತ್ತಿದ್ದು, ಇದರ ಟೈಟಲನ್ನು ಇಂದು ರಿವಿಲ್ ಮಾಡಲಾಗಿದೆ. ಈ ಚಿತ್ರಕ್ಕೆ ‘ಮುದ್ದು ರಾಕ್ಷಸಿ’ ಎಂಬ ಟೈಟಲ್ ಇಡಲಾಗಿದ್ದು, ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ.
ಪುನೀತ್ ಶ್ರೀನಿವಾಸ್ ರಚಿಸಿ ನಿರ್ದೇಶಿಸುತ್ತಿರುವ ಈ ಚಿತ್ರವನ್ನು ಶ್ರೀ ಚೌಡೇಶ್ವರಿ ಕಂಬೈನ್ಸ್ ಬ್ಯಾನರ್ ನಲ್ಲಿ ಎಲ್ ಮೋಹನ್ ಕುಮಾರ್ ನಿರ್ಮಾಣ ಮಾಡಿದ್ದು, ಎಂ ಎಸ್ ತ್ಯಾಗರಾಜ್ ಸಂಗೀತ ಸಂಯೋಜನೆ ನೀಡುತ್ತಿದ್ದಾರೆ. ಸಚಿನ್ ಜಗದೇಶ್ವರನ್ ಸಂಭಾಷಣೆ, ಡಾಕ್ಟರ್ ವಿ ನಾಗೇಂದ್ರ ಪ್ರಸಾದ್ ಸಾಹಿತ್ಯ, ವಿನೋದ್ ಅವರ ಸಾಹಸ ನಿರ್ದೇಶನ, ಧನು ಹಾಗೂ ಸಂತೋಷ್ ನೃತ್ಯ ನಿರ್ದೇಶನ, ಹಾಗೂ ಏ ಕರುಣಾಕರ್ ಅವರ ಛಾಯಾಗ್ರಾಣವಿದೆ.