ಕಾರವಾರದ ಸೀಬರ್ಡ್ ನೌಕಾನೆಲೆ ಸಿಬ್ಬಂದಿಗಳಿಗೆ ಹನಿಟ್ರ್ಯಾಪ್ ಮಾಡಿದ ಯುವತಿಯೊಬ್ಬಳು ಪಾಕಿಸ್ತಾನಕ್ಕೆ ಮಾಹಿತಿ ರವಾನೆ ಮಾಡಿದ್ದಾಳೆ ಎನ್ನಲಾಗಿದ್ದು, ಎನ್ ಐ ಎ ತನಿಖೆ ನಡೆಸುತ್ತಿದೆ.
ಕಾರವಾರದ ಸೀಬರ್ಡ್ ನೌಕಾನೆಲೆ ಸಿಬ್ಬಂದಿಗಳಿಗೆ ಫೇಸ್ ಬುಕ್ ಮೂಲಕ ರಿಕ್ವೆಸ್ಟ್ ಕಳುಹಿಸಿ ನಂತರ ಅವರ ಸ್ನೇಹ ಸಂಪಾದಿಸಿ ನೌಕಾನೆಲೆಯ ಬಗ್ಗೆ ಗೌಪ್ಯ ಮಾಹಿತಿಯನ್ನು ಕಲೆ ಹಾಕಿ ಅದನ್ನು ಪಾಕಿಸ್ತಾನಕ್ಕೆ ರವಾನೆ ಮಾಡುತ್ತಿದ್ದಳು ಎಂಬ ಮಾಹಿತಿ ಲಭ್ಯವಾಗಿದೆ.
ಕಾರವಾರ ತಾಲೂಕಿನ ತೋಡೂರು ಗ್ರಾಮದ ಸುನೀಲ್ ನಾಯ್ಕ್, ಮುದ್ಗಾ ಗ್ರಾಮದ ವೇತನ್ ರಂಡೇಲ್ ಮತ್ತು ಹಳವಳ್ಳಿ ಗ್ರಾಮದ ಅಕ್ಷಯ್ ರವಿ ನಾಯ್ಕ್ ಎಂಬುವವರನ್ನು ಎನ್ ಐ ಎ ವಿಚಾರಣೆಗೊಳಪಡಿಸಲಾಗುತ್ತಿದೆ. ಸದ್ಯ ಸ್ಥಳಕ್ಕೆ ಧಾವಿಸಿದ ಎನ್ ಐ ಎ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ತನಿಖೆಯಿಂದಷ್ಟೇ ಇನ್ನಷ್ಟು ಮಾಹಿತಿ ಹೊರಬರಬೇಕಿದೆ.