HomeKarnatakaBREAKING NEWS: ನಾಡಬಾಂಬ್ ಸ್ಫೋಟ: ಮಗ ಸಾವು, ತಂದೆ ಸ್ಥಿತಿ ಗಂಭೀರ

BREAKING NEWS: ನಾಡಬಾಂಬ್ ಸ್ಫೋಟ: ಮಗ ಸಾವು, ತಂದೆ ಸ್ಥಿತಿ ಗಂಭೀರ

ಹೊಸಕೋಟೆ: ನಾಡಬಾಂಬ್ ಸ್ಫೋಟಗೊಂಡು ಮಗ ಸಾವನ್ನಪ್ಪಿದ್ದು, ತಂದೆ ಸ್ಥಿತಿ ಗಂಭೀರವಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ದೊಡ್ದನಲ್ಲಾಳ ಗ್ರಾಮದಲ್ಲಿ ನಡೆದಿದೆ.

ಪವನ್ (19) ಮೃತ ಯುವಕ. ಪವನ್ ತಂದೆಯ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಫೋಟದ ತೀವ್ರತೆಗೆ ಮನೆಯ ಮೇಲ್ಛಾವಣಿ ಛಿದ್ರ ಛಿದ್ರಗೊಂಡಿದೆ.

ಕಾಡುಪ್ರಾಣಿಗಳ ಬೇಟೆಗಾಗಿ ನಾಡಬಾಂಬ್ ತಯಾರಿಸುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ ಎಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ಹೊಸಕೋಟೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

 

For Latest News Updates, Join Our Whatsapp Community🚩
RELATED ARTICLES

Most Popular