HomeKarnatakaBIG NEWS: ಇನ್ನು ಲಿಂಗಾಯಿತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಕಾನೂನು ಹೋರಾಟ

BIG NEWS: ಇನ್ನು ಲಿಂಗಾಯಿತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಕಾನೂನು ಹೋರಾಟ

ಕೊಪ್ಪಳ: ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ಕಾನೂನು ಹೋರಾಟ ಕೈಗೊಳ್ಳಲಾಗುವುದು ಎಂದು ಕೂಡಲ ಸಂಗಮ ಪಂಚಮಸಾಲಿ ಪೀಠದ ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದ್ದಾರೆ.

ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು, 2ಎ ಮೀಸಲಾತಿಗಾಗಿ ಕಾನೂನು ಹೋರಾಟ ನಡೆಸಲು ಯೋಜನೆ ರೂಪಿಸಲಾಗಿದೆ. ಇದಕ್ಕೆ ಮೊದಲು ರಾಜ್ಯದಲ್ಲಿರುವ ಸಮುದಾಯದ ವಕೀಲರ ಸಂಘಟನೆಯ ಮಹಾಪರಿಷತ್ ನಡೆಸಲಾಗುವುದು. ಸೆಪ್ಟೆಂಬರ್ 2ರಂದು ಬೆಳಗಾವಿಯಲ್ಲಿ ಲಿಂಗಾಯಿತ ಪಂಚಮಸಾಲಿ ವಕೀಲರ ಮಹಾಪರಿಷತ್ ಹಮ್ಮಿಕೊಳ್ಳಲಾಗಿದೆ. ನ್ಯಾಯಾಲಯದ ಮೊರೆ ಹೋಗಲು ಸಮಾಜದ ವಕೀಲರ ಸಂಘಟನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ನಮ್ಮ ಸಮಾಜದ ಶಾಸಕರು, ಸಚಿವರು 2ಎ ಮೀಸಲಾತಿಗಾಗಿ ಮುಖ್ಯಮಂತ್ರಿಗಳ ಮೇಲೆ ಒತ್ತಡ ಹೇರಬೇಕು. ಸಮಾಜದ ಶಾಸಕರು ಕೇವಲ ಪಕ್ಷದ ಪ್ರಭಾವ ಮತ್ತು ಚಿಹ್ನೆಯಿಂದ ಗೆದ್ದಿಲ್ಲ. ಸಮುದಾಯದ ಜನರ ಬೆಂಬಲ ಕೂಡ ಅವರಿಗೆ ಸಿಕ್ಕಿದ್ದು, ಸಮಾಜದ ಋಣ ತೀರಿಸಬೇಕು ಎಂದು ಆಗ್ರಹಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular