HomeKarnatakaBIG NEWS: HDK, ನಿರಾಣಿ. ಜೊಲ್ಲೆ, ರೆಡ್ಡಿ ವಿರುದ್ಧ ತನಿಖೆಗೆ ಅನುಮತಿ ನೀಡಲು ಒತ್ತಾಯಿಸಿ ಇಂದು...

BIG NEWS: HDK, ನಿರಾಣಿ. ಜೊಲ್ಲೆ, ರೆಡ್ಡಿ ವಿರುದ್ಧ ತನಿಖೆಗೆ ಅನುಮತಿ ನೀಡಲು ಒತ್ತಾಯಿಸಿ ಇಂದು ಕಾಂಗ್ರೆಸ್ ರಾಜಭವನ ಚಲೋ

ಬೆಂಗಳೂರು: ಪ್ರತಿಪಕ್ಷ ನಾಯಕರ ಪ್ರಾಸಿಕ್ಯೂಷನ್ ಗೆ ಆಗ್ರಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಇಂದು ಕಾಂಗ್ರೆಸ್ ರಾಜಭವನ ಚಲೋ ಹಮ್ಮಿಕೊಂಡಿದೆ.

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ರಾಜ್ಯದ ಮಾಜಿ ಸಚಿವರಾದ ಮುರುಗೇಶ್ ನಿರಾಣಿ, ಜನಾರ್ದನ ರೆಡ್ಡಿ, ಶಶಿಕಲಾ ಜೊಲ್ಲೆ ಅವರ ವಿರುದ್ಧ ತನಿಖೆಗೆ ಅನುಮತಿ ನೀಡಲು ಒತ್ತಾಯಿಸಿ ಮತ್ತು ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಾಸಿಕ್ಯೂಷನ್ ಕೈಬಿಡಲು ಆಗ್ರಹಿಸಿ ರಾಜಭವನ ಚಲೋ ನಡೆಸಲಿದ್ದು, ಸಚಿವರು, ಶಾಸಕರು ಕೂಡ ಭಾಗಿಯಾಗಲಿದ್ದಾರೆ.

ರಾಜ್ಯಪಾಲರು ಪಕ್ಷಪಾತ ಧೋರಣೆ ಅನುಸರಿಸುತ್ತಿದ್ದಾರೆ. ಬಿಜೆಪಿ ಕೈಗೊಂಬೆಯಾಗಿ ರಾಜ್ಯಪಾಲರು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಆರೋಪಿಸಲಾಗಿದ್ದು, ಬಿಜೆಪಿ ಮತ್ತು ಜೆಡಿಎಸ್ ನಾಯಕರ ವಿರುದ್ಧದ ಪ್ರಾಸಿಕ್ಯೂಷನ್ ಅರ್ಜಿಗಳಿಗೆ ಅನುಮತಿ ನೀಡಬೇಕು. ಸಿದ್ದರಾಮಯ್ಯ ವಿರುದ್ಧದ ಪ್ರಾಸಿಕ್ಯೂಷನ್ ಕೈಬಿಡಬೇಕೆಂದು ಒತ್ತಾಯಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular