HomeKarnatakaBREAKING: RTI ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಗಡಿಪಾರು ಮಾಡಲು ಆಗ್ರಹಿಸಿ ದೂರು

BREAKING: RTI ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಗಡಿಪಾರು ಮಾಡಲು ಆಗ್ರಹಿಸಿ ದೂರು

ಮೈಸೂರು: ಆರ್.ಟಿ.ಐ. ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರ ವಿರುದ್ಧ ಮೈಸೂರು ಪೊಲೀಸ್ ಆಯುಕ್ತರಿಗೆ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ ದೂರು ನೀಡಿದ್ದಾರೆ.

ಸ್ನೇಹಮಯಿ ಕೃಷ್ಣ ಅವರನ್ನು ಗಡಿಪಾರು ಮಾಡಬೇಕು. ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ಮನವಿ ಮಾಡಿದ್ದಾರೆ. ಸ್ನೇಹಮಯಿ ಕೃಷ್ಣ ವಿರುದ್ಧ 17 ಕ್ರಿಮಿನಲ್ ಕೇಸ್ ಗಳು ದಾಖಲಾಗಿವೆ. ರಾಜ್ಯದ ಹಲವೆಡೆ ಅವರ ವಿರುದ್ಧ ಪ್ರಕರಣ ದಾಖಲಾಗಿವೆ. ಆಸ್ತಿ ವಿಚಾರದಲ್ಲಿ ಹಸ್ತಕ್ಷೇಪ ಮಾಡಿ ಭೂಮಿ ವಶಪಡಿಸಿಕೊಳ್ಳುವುದು, ನನ್ನನ್ನು ಸೇರಿದಂತೆ ನಗರದ ಗಣ್ಯರನ್ನು ಹೆದರಿಸುವ ಕೆಲಸ ಮಾಡುತ್ತಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಮೈಸೂರು ಪೊಲೀಸ್ ಕಮಿಷನರ್ ಗೆ ಎಂ. ಲಕ್ಷ್ಮಣ ಮನವಿ ಮಾಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular