ಬೆಂಗಳೂರು : ಬಿಜೆಪಿ-ಜೆಡಿಎಸ್ ವಿರುದ್ಧ ಒಂದು ಉಗ್ರ ಹೋರಾಟ ಇದೆ, ಎಲ್ರೂ ಬನ್ನಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಕರೆ ನೀಡಿದ್ದಾರೆ.
ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಜೆಡಿಎಸ್ ವಿರುದ್ಧ ಕಾಂಗ್ರೆಸ್ ಇಂದು ಹೋರಾಟ ನಡೆಸುತ್ತಿದೆ. ಇಂದು ಬೆಳಗ್ಗೆ 10 ಗಂಟೆಯಿಂದ ರಾಜಭವನ ಚಲೋ ಆರಂಭವಾಗಲಿದೆ. ವಿಧಾನಸೌಧದ ಗಾಂಧಿ ಪ್ರತಿಮೆಯಿಂದ ರಾಜಭವನಕ್ಕೆ ಕಾಂಗ್ರೆಸ್ ನಾಯಕರು ಚಲೋ ನಡೆಸಲಿದ್ದಾರೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದ ರಾಜ್ಯಪಾಲರ ನಡೆ ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಇಂದು ನಡೆಸಲಿದ್ದು, ಸಿಎಂ ಸಿದ್ದರಾಮಯ್ಯ ಭವಿಷ್ಯ ನಿರ್ಧಾರವಾಗಲಿದೆ.