HomeKarnatakaBIG UPDATE : ರಾಜ್ಯ ಸರ್ಕಾರದಿಂದ ವಿವಿಧ ಸಮುದಾಯಕ್ಕೆ ಗುಡ್ ನ್ಯೂಸ್ : ಸಾಲ ಸೌಲಭ್ಯಕ್ಕೆ...

BIG UPDATE : ರಾಜ್ಯ ಸರ್ಕಾರದಿಂದ ವಿವಿಧ ಸಮುದಾಯಕ್ಕೆ ಗುಡ್ ನ್ಯೂಸ್ : ಸಾಲ ಸೌಲಭ್ಯಕ್ಕೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ

ಬೆಂಗಳೂರು : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ವತಿಯಿಂದ 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ವಿವಿಧ ನಿಗಮಗಳಾದ ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ಸವಿತಾ-ಸಮಾಜ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ಅಲೆಮಾರಿ-ಅರೆಮಾರಿ ಅಭಿವೃದ್ಧಿ ನಿಗಮ (ನಿ)., ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ಕಾಡುಗೊಲ್ಲ ಅಭಿವೃದ್ಧಿ ನಿಗಮ (ನಿ) ಗಳಲ್ಲಿ ವಿವಿಧ ಯೋಜನೆಯಡಿಯಲ್ಲಿ ಸಾಲ ಮತ್ತು ಸಹಾಯಧನ ಸೌಲಭ್ಯ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಸೇವಾ ಸಿಂಧು ತಂತ್ರಾಂಶದಲ್ಲಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ದಿನಾಂಕ ಸೆ.15 ರವರೆಗೆ ವಿಸ್ತರಣೆ ಮಾಡಲಾಗಿದೆ.

ವಿವಿಧ ಯೋಜನೆಗಳಾದ ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ/ ಕಾಯಕ ಕಿರಣ/ಶಹಾಜೀರಾಜೆ ಸಮೃದ್ಧಿ ಯೋಜನೆ., ಗಂಗಾ ಕಲ್ಯಾಣ ನೀರಾವರಿ ಯೋಜನೆ/ ಜೀವಜಲ/ ಜೀಜಾವು ಜಲಭಾಗ್ಯ ಯೋಜನೆ., ಅರಿವು –ಶೈಕ್ಷಣಿಕ ಸಾಲ ಯೋಜನೆ., ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ., ಸ್ವಾವಲಂಬಿ ಸಾರಥಿ ಯೋಜನೆ., ಸ್ವಯಂ ಉದ್ಯೋಗಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ)., ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆಗೆ ವೆಬ್ ಸೈಟ್ https://www.kaushalkar.com ನಲ್ಲಿ ಅರ್ಜಿ ಸಲ್ಲಿಸಬಹುದು. ಹೊಲಿಗೆ ಯಂತ್ರ ವಿತರಣೆ ಯೋಜನೆ ( ದೇವರಾಜ ಅರಸು ನಿಗಮದ ವ್ಯಾಪ್ತಿಗೆ ಒಳಪಡುವ ಸಮುದಾಯದವರಿಗೆ)., ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು ಯೋಜನೆ (ವಿಶ್ವrಕರ್ಮ ಸಮುದಾಯದವರಿಗೆ ಮಾತ್ರ)., ಭೋಜನಾಲಯ ಕೇಂದ್ರ (ವೀರಶೈವ-ಲಿಂಗಾಯತ ಸಮುದಾಯದವರಿಗೆ)., ವಿಭೂತಿ ನಿರ್ಮಾಣ ಘಟಕ (ವೀರಶೈವ-ಲಿಂಗಾಯತ ಸಮುದಾಯದವರಿಗೆ). ಮತ್ತು ಮರಾಠ ಮಿಲ್ಟ್ರಿ ಹೋಟೆಲ್ ಯೋಜನೆ (ಮರಾಠ ಸಾಮುದಾಯದವರಿಗೆ)ಗಳ ಸಾಲ ಸೌಲಭ್ಯ ಪಡೆಯಬಹುದು.

ಆಸಕ್ತರು ಅರ್ಜಿಗಳನ್ನು ಸೇವಾ ಸಿಂಧು ತಂತ್ರಾಂಶದಲ್ಲಿ ಸೆ.15 ರೊಳಗೆ ಸಲ್ಲಿಸಬಹುದು. 2023-24ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೇ ಇರುವ ಫಲಾಪೇಕ್ಷಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾ,ಪಕರ ಕಚೇರಿ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತ, ನಂ.123/1037, 1ನೇ ಮಹಡಿ, 20ನೇ ಮುಖ್ಯ ರಸ್ತೆ, 5ನೇ ಬ್ಲಾಕ್, ವೆಸ್ಟ್ ಆಫ್ ಕಾರ್ಡ್ ರೋಡ್, ರಾಜಾಜಿನಗರ, ಬೆಂಗಳೂರು ನಗರ ಜಿಲ್ಲೆ -560 010 ಅಥವಾ ನಿಗಮದ ಜಿಲ್ಲಾ ಕಛೇರಿಯ ಸಹಾಯವಾಣಿ ಸಂಖ್ಯೆ: 080-23156066 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ದಕ್ಷಿಣ ಜಿಲ್ಲೆ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತದ ಜಿಲ್ಲಾ ವ್ಯವಸ್ಥಾಸಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular