ಬೆಂಗಳೂರು : ಪ್ರಸಕ್ತ (2024-25) ಸಾಲಿನಲ್ಲಿ ‘ಎನಿವೇರ್’ ನೋಂದಣಿ ವ್ಯವಸ್ಥೆಯನ್ನು ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸಲಾಗಿದ್ದು, ಸೆ.2 ರಿಂದ ಜಾರಿಗೆ ಬರಲಿದೆ.
ಈ ವ್ಯವಸ್ಥೆಯನ್ನು ಬೆಂಗಳೂರು ನಗರ ಜಿಲ್ಲೆಯಲ್ಲಿ 2011 ರಲ್ಲಿ ತುಮಕೂರು ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಮಾರ್ಚ್ 2024 ರಲ್ಲಿ ನೋಂದಣಿ ಕಾಯ್ದೆ 1908 ರ ಕಲಂ (5) ಹಾಗೂ ಕಲಂ(6) ರಡಿಯಲ್ಲಿ ಜಾರಿಗೆ ಅನುಷ್ಠಾನಗೊಳಿಸಲಾಗಿದೆ.ಎನಿವೇರ್ ನೋಂದಣಿ ವ್ಯವಸ್ಥೆಯು ಈ ಜಿಲ್ಲೆಗಳಲ್ಲಿ ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿದೆ.
ಪ್ರಸ್ತುತ ಸಾರ್ವಜನಿಕರು ಸ್ಥಿರಾಸ್ತಿ ಇರುವ ವ್ಯಾಪ್ತಿಯ ಉಪನೋಂದಣಿ ಕಚೇರಿಯಲ್ಲಿ ಮಾತ್ರ ದಸ್ತಾವೇಜನ್ನು ನೋಂದಣಿ ಮಾಡಲು ಅವಕಾಶವಿದ್ದು, ಆದರೆ ಎನಿವೇರ್ ನೋಂದಣಿಯಲ್ಲಿ ದಸ್ತಾವೇಜನ್ನು ಸ್ಥಿರಾಸ್ತಿ ಇರುವ ಜಿಲ್ಲೆಯ ಯಾವುದಾದರೂ ಉಪನೋಂದಣಿ ಕಚೇರಿಯಲ್ಲಿ ನೋಂದಾಯಿಸಿಕೊಳ್ಳಬಹುದು.
ಎನಿವೇರ್ ನೋಂದಣಿ ವ್ಯವಸ್ಥೆಯು ಸಾರ್ವಜನಿಕರಿಗೆ ಹಲವಾರು ರೀತಿಯಲ್ಲಿ ಉಪಯುಕ್ತವಾಗಿದ್ದು, ದಸ್ತಾವೇಜಿನ ನೋಂದಣಿಯಲ್ಲಿ ಪಾರದರ್ಶಕತೆ ಹೆಚ್ಚಿಸುತ್ತದೆ.
ನೋಂದಣಿಯಲ್ಲಿ ವಿಳಂಬವನ್ನು ತಡೆಗಟ್ಟುತ್ತದೆ. ಸಾರ್ವಜನಿಕರು ಸಮೀಪದಲ್ಲಿರುವ ಉಪನೋಂದಣಿ ಕಚೇರಿಯಲ್ಲಿ ದಸ್ತಾವೇಜನ್ನು ನೋಂದಾಯಿಸಬಹುದು. ಸ್ಲಾಟ್ ಲಭ್ಯವಿರುವಂತಹ ಕಚೇರಿಯನ್ನು ನೋಂದಣಿಗೆ ಆಯ್ಕೆ ಮಾಡಿಕೊಳ್ಳಬಹುದು. ನೋಂದಣಿ ಪ್ರಕ್ರಿಯೆ ಸುಲಭವಾಗುವುದಲ್ಲದೆ ಸಮಯವು ಸಹ ಉಳಿಯುತ್ತದೆ. ಉಪ ನೋಂದಣಿ ಕಚೇರಿಗಳಲ್ಲಿ ಜನದಟ್ಟಣೆ ಕಡಿಮೆಯಾಗುತ್ತದೆ. ಕಚೇರಿ ಸಿಬ್ಬಂದಿಗಳ ಮೇಲೆ ಕೆಲಸದ ಒತ್ತಡ ಕಡಿಮೆಯಾಗುತ್ತದೆ ಹಾಗೂ ಕಚೇರಿಗಳಲ್ಲಿ ನೋಂದಣಿ ಕೆಲಸ ಸಮಾನವಾಗಿ ಹಂಚಿಕೆಯಾಗುತ್ತದೆ.
ಆದ್ದರಿಂದ ಸಾರ್ವಜನಿಕರು ಎನಿವೇರ್ ನೋಂದಣಿಯ ಸದುಪಯೋಗಪಡಿಸಿಕೊಂಡು ತಮಗೆ ಹತ್ತಿರದ ಅಥವಾ ನೋಂದಣಿಗೆ ಸ್ಲಾಟ್ ಲಭ್ಯವಿರುವಂತಹ ಕಚೇರಿ ಆಯ್ಕೆ ಮಾಡಿಕೊಂಡು ದಸ್ತಾವೇಜನ್ನು ನೋಂದಾಯಿಸಿಕೊಳ್ಳಬಹುದು.
ಎನಿವೇರ್ ನೋಂದಣಿ ವ್ಯವಸ್ಥೆಯನ್ನು ನೋಂದಣಿ ಕಾಯ್ದೆ 1908 ರ ಕಲಂ(5) ಹಾಗೂ ಕಲಂ (6) ರಡಿಯಲ್ಲಿ ಅನುಷ್ಟಾನಗೊಳಿಸಲಾಗುತ್ತಿದೆ.ಸಾರ್ವಜನಿಕರು ಸ್ಥಿರಾಸ್ತಿ ಇರುವ ವ್ಯಾಪ್ತಿಯ ಉಪ ನೋಂದಣಿ ಕಚೇರಿಯಲ್ಲಿ ಮಾತ್ರ ದಸ್ತಾವೇಜನ್ನ ನೋಂದಣಿ ಮಾಡಲು ಅವಕಾಶವಿತ್ತು, ಆದರೆ ಎನಿವೇರ್ ನೋಂದಣಿಯಲ್ಲಿ ದಸ್ತಾವೇಜನ್ನು ಸ್ಥಿರಾಸ್ತಿ ಇರುವ ಜಿಲ್ಲೆಯ ಯಾವುದಾದರೂ ಉಪನೋಂದಣಿ ಕಚೇರಿಯಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ.
ಸಾರ್ವಜನಿಕರು ಎನಿವೇರ್ ನೋಂದಣಿಯ ವ್ಯವಸ್ಥೆಯನ್ನು ಸದುಪಯೋಗಪಡಿಸಿಕೊಂಡು ಜಿಲ್ಲೆ ಒಳಗೆ ತಮಗೆ ಹತ್ತಿರ ಇರುವ ನೋಂದಣಿ ಸ್ಲಾಟ್ ಲಭ್ಯವಿರುವಂತಹ ಕಚೇರಿ ಆಯ್ಕೆ ಮಾಡಿಕೊಂಡು ದಸ್ತಾವೇಜನ್ನು ನೋಂದಾಯಿಸಿಕೊಳ್ಳಬಹುದೆಂದು ಪ್ರಕಟಣೆ ಹೊರಡಿಸಲಾಗಿದೆ.