HomeKarnatakaBREAKING NEWS: ಆಟೋ-ಕ್ಯಾಂಟರ್ ಭೀಕರ ಅಪಘಾತ: ಇಬ್ಬರು ಮಹಿಳೆಯರು ಸ್ಥಳದಲ್ಲೇ ದುರ್ಮರಣ

BREAKING NEWS: ಆಟೋ-ಕ್ಯಾಂಟರ್ ಭೀಕರ ಅಪಘಾತ: ಇಬ್ಬರು ಮಹಿಳೆಯರು ಸ್ಥಳದಲ್ಲೇ ದುರ್ಮರಣ

ರಾಣೆಬೆನ್ನೂರು: ಆಟೋ ಹಾಗೂ ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚಳಗೇರಿ ಟೋಲ್ ಬಳಿ ಸಂಭವಿಸಿದೆ.

ಅಪಘಾತದಲ್ಲಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ರಾಣೆಬೆನ್ನೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ರಾಣೆಬೆನ್ನೂರು ಗ್ರಾಮಾಂತರ ಪೊಲಿಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular