HomeKarnatakaBREAKING NEWS: ರಿವರ್ಸ್ ಬರುತ್ತಿದ್ದ ಲಾರಿಗೆ ಬೈಕ್ ಡಿಕ್ಕಿ: ಮಗ ಸ್ಥಳದಲ್ಲೇ ಸಾವು; ತಾಯಿ ಸ್ಥಿತಿ...

BREAKING NEWS: ರಿವರ್ಸ್ ಬರುತ್ತಿದ್ದ ಲಾರಿಗೆ ಬೈಕ್ ಡಿಕ್ಕಿ: ಮಗ ಸ್ಥಳದಲ್ಲೇ ಸಾವು; ತಾಯಿ ಸ್ಥಿತಿ ಗಂಭೀರ

ಬೆಂಗಳೂರು: ರಿವರ್ಸ್ ಬರುತ್ತಿದ್ದ ಲಾರಿಗೆ ಬೈಕ್ ಡಿಕ್ಕಿಯಾಗಿ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ದಾಬಸ್ ಪೇಟೆ ಬಳಿ ನಡೆದಿದೆ.

ಲಾರಿಗೆ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಮಗ ಸಾವನ್ನಪ್ಪಿದ್ದು, ತಾಯಿ ಗಂಭಿರವಾಗಿ ಗಾಯಗೊಂಡಿದ್ದಾರೆ. ಚಿತ್ರದುರ್ಗದ ನಿವಾಸಿ ಕುಶಾಲ್ (20) ಮೃತ ಯುವಕ. ತಾಯಿ ಮಮತಾ (45) ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ತಾಯಿ ಹಾಗೂ ಮಗ ಬೈಕ್ ನಲ್ಲಿ ಬೆಂಗಳೂರಿನಿಂದ ಚಿತ್ರದುರ್ಗಕ್ಕೆ ಹೊರಟಿದ್ದರು. ಈ ವೇಳೆ ಈ ಅಪಘಾತ ಸಂಭವಿಸಿದೆ. ನಿರ್ಲಕ್ಷ್ಯ ಆರೋಪದಲ್ಲಿ ಲಾರಿ ಚಾಲಕ ದಿವಾಕರ್ ನನ್ನು ಪೊಲೀರು ವಶಕ್ಕೆ ಪಡೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular