HomeKarnataka'ಗೃಹಲಕ್ಷ್ಮಿ'ಯರಿಗೆ ಭರ್ಜರಿ ಗುಡ್ ನ್ಯೂಸ್ : 1 ತಿಂಗಳು 'ರೀಲ್ಸ್' ಮಾಡಿ ಆಕರ್ಷಕ ಬಹುಮಾನ ಗೆಲ್ಲಿ..!

‘ಗೃಹಲಕ್ಷ್ಮಿ’ಯರಿಗೆ ಭರ್ಜರಿ ಗುಡ್ ನ್ಯೂಸ್ : 1 ತಿಂಗಳು ‘ರೀಲ್ಸ್’ ಮಾಡಿ ಆಕರ್ಷಕ ಬಹುಮಾನ ಗೆಲ್ಲಿ..!

ಬೆಂಗಳೂರು : ಗೃಹಲಕ್ಷ್ಮಿಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರ್ಜರಿ ಗುಡ್ ನ್ಯೂಸ್ ಒಂದನ್ನು ನೀಡಿದ್ದಾರೆ. ಯಜಮಾನಿಯರು ಒಂದು ತಿಂಗಳು ರೀಲ್ಸ್ ಮಾಡುವ ಮೂಲಕ ಆಕರ್ಷಕ ಬಹುಮಾನ ಗೆಲ್ಲಬಹುದಾಗಿದೆ ಎಂದು ಟ್ವೀಟ್ ನಲ್ಲಿ ಮಾಹಿತಿ ನೀಡಿದ್ದಾರೆ.

ರಾಜ್ಯದ ಕೋಟ್ಯಂತರ ಮನೆಯೊಡತಿಯರ ಕುಟುಂಬ ನಿರ್ವಹಣೆಯ ಜವಾಬ್ದಾರಿಯೊಂದಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಅನುಷ್ಠಾನಗೊಳಿಸಿರುವ ‘ಗೃಹಲಕ್ಷ್ಮಿ’ ಯೋಜನೆ ಯಶಸ್ವಿಯಾಗಿ ಒಂದು ವರ್ಷ ಪೂರೈಸಿರುವ ಸಂಭ್ರಮದಲ್ಲಿದೆ. ಮನೆಯೊಡತಿಯರಿಗೆ/ಕುಟುಂಬಗಳಿಗೆ ಗೃಹಲಕ್ಷ್ಮಿ ಯೋಜನೆಯಿಂದ ಏನೆಲ್ಲ ಬದಲಾವಣೆಗಳಾಗಿವೆ ಎಂಬುದನ್ನು ತಿಳಿದುಕೊಳ್ಳಲು ಕಾತುರಳಾಗಿದ್ದೇನೆ. ನಿಮ್ಮ ಜೀವನದಲ್ಲಿ ಗೃಹಲಕ್ಷ್ಮಿ ಯೋಜನೆಯಿಂದಾದ ಬದಲಾವಣೆಯ ಕುರಿತು ಒಂದು ತಿಂಗಳ ಅವಧಿಯವರೆಗೆ (ಸೆಪ್ಟೆಂಬರ್ 30) ರೀಲ್ಸ್ ಮೂಲಕ ಸೋಷಿಯಲ್ ಮಿಡಿಯಾಗಳಲ್ಲಿ ಪೋಸ್ಟ್ ಮಾಡಿ ನಮ್ಮೊಂದಿಗೆ ಹಂಚಿಕೊಳ್ಳಿ, ಯಾವ ರೀಲ್ಸ್ ಗಳು ಹೆಚ್ಚಿನ ವೀಕ್ಷಣೆಗಳನ್ನು (Views) ಪಡೆದುಕೊಳ್ಳುತ್ತವೆಯೋ ಅಂತಾ ರೀಲ್ಸ್ ಗಳಿಗೆ ವೈಯಕ್ತಿಕವಾಗಿ ಬಹುಮಾನ ವಿತರಿಸಲಿದ್ದೇನೆ ಎಂದು ಹೇಳಿದ್ದಾರೆ.

ಗೃಹಲಕ್ಷ್ಮಿ ಯೋಜನೆಯ ಹಣದಿಂದಾಗಿ ನಾಡಿನ ಕೋಟ್ಯಂತರ ಮಹಿಳೆಯರು ನೆಮ್ಮದಿಯ ಬದುಕು ಕಟ್ಟಿಕೊಂಡಿದ್ದಾರೆ. ಗೃಹಲಕ್ಷ್ಮಿ ಯೋಜನೆ ಅನುಷ್ಠಾನಗೊಂಡಾಗಿನಿಂದ ಮಹಿಳೆಯರ ಮುಖದಲ್ಲಿ ಮಂದಹಾಸ ಮೂಡಿದೆ. ಗೃಹಲಕ್ಷ್ಮಿ ಯೋಜನೆ ಯಶಸ್ವಿ ಪಯಣದೊಂದಿಗೆ ಒಂದು ವರ್ಷ ಪೂರೈಸಿದೆ. ಈ ಯಶಸ್ವಿ ಪಯಣದ ಸಂಭ್ರಮದಲ್ಲಿ ತಾವೂ ಭಾಗವಹಿಸಿ, ಗೃಹಲಕ್ಷ್ಮಿಯಿಂದ ತಮಗಾದ ಅನಿಸಿಕೆಗಳನ್ನು ನಮ್ಮೊಂದಿಗೆ ಹಂಚಿಕೊಳ್ಳಿ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular