alex Certify ಭಾರಿ ಮಳೆಯಿಂದ ಅವಘಡ: ಪಕ್ಕದ ಮನೆ ಗೋಡೆ ಕುಸಿದು ಮಹಿಳೆ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭಾರಿ ಮಳೆಯಿಂದ ಅವಘಡ: ಪಕ್ಕದ ಮನೆ ಗೋಡೆ ಕುಸಿದು ಮಹಿಳೆ ಸಾವು

ಯಾದಗಿರಿ ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ತೇವಗೊಂಡಿದ್ದ ಮನೆ ಗೋಡೆ ಕುಸಿದು ವೃದ್ಧೆ ಸಾವನ್ನಪ್ಪಿದ್ದಾರೆ. ಸಕಿನಾಬಿ ನದಾಫ್(70) ಮೃತಪಟ್ಟವರು ಎಂದು ಹೇಳಲಾಗಿದೆ.

ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಹುರಸಗುಂಡಗಿ ಗ್ರಾಮದಲ್ಲಿ ಘಟನೆ ನಡೆದಿದೆ. ಪಕ್ಕದ ಮನೆಯ ಕಟ್ಟೆಯ ಮೇಲೆ ಕುಳಿತಿದ್ದ ಸಂದರ್ಭದಲ್ಲಿ ಮನೆ ಗೋಡೆ ಕುಸಿದು ಗಂಭೀರವಾಗಿ ಗಾಯಗೊಂಡಿದ್ದ ಸಕೀನಾಬಿ ಅವರನ್ನು ಕಲಬುರಗಿ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.

ಸಕೀನಾಬಿ ಮಹಿಳೆಯರೊಂದಿಗೆ ಕುಳಿತಿದ್ದಾಗ ಏಕಾಏಕಿ ಮನೆಯ ಗೋಡೆ ಕುಸಿದಿದೆ. ಅವರ ಜೊತೆಗಿದ್ದ ಇಬ್ಬರು ಮಹಿಳೆಯರು ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಭೀಮರಾಯನ ಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...