ನವದೆಹಲಿ : ಸಾಮಾಜಿಕ ಮತ್ತು ಜಾತಿಗಣತಿಗೆ ಕೋರಿದ್ದ ಅರ್ಜಿ ವಜಾಗೊಳಿಸಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ.
ಸರ್ಕಾರದ ನಿಯಮಗಳ ವಿಚಾರದಲ್ಲಿ ಮಧ್ಯ ಪ್ರವೇಶ ಮಾಡಲ್ಲ ಎಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾಗೊಳಿಸಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ.
ಜಾತಿವಾರು ಜನಗಣತಿ ನಡೆಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಬೇಕು ಎಂದು ಕೋರಿ ಸುಪ್ರೀಂಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು. ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಈ ಆದೇಶ ಹೊರಡಿಸಿದೆ.