ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿ ವಿಚಾರಣೆ ಹೈಕೋರ್ಟ್ ನಲ್ಲಿ ಆರಂಭವಾಗಿದೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಸೆ.2 ಕ್ಕೆ ಮುಂದೂಡಿತ್ತು.ಇದೀಗ ವಿಚಾರಣೆ ಆರಂಭವಾಗಿದ್ದು, ಸಿಎಂ ಸಿದ್ದರಾಮಯ್ಯ ಭವಿಷ್ಯ ಇಂದೇ ನಿರ್ಧಾರವಾಗುವ ಸಾಧ್ಯತೆಯಿದೆ.
ರಾಜ್ಯಪಾಲರ ನಡೆ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಏಕಸದಸ್ಯಪೀಠ, ಉಭಯ ವಕೀಲರ ಸುದೀರ್ಘ ವಾದ-ಪ್ರತಿವಾದವನ್ನು ಆಲಿಸಿತ್ತು.
ಸಿಎಂ ಸಿದ್ದರಾಮಯ್ಯ ಪರ ಹಿರಿಯ ವಕೀಲರಾದ ಅಭಿಷೇಕ್ ಮನುಸಿಂಘ್ವಿ ಹಾಗೂ ರವಿವರ್ಮ ಕುಮಾರ್ ವಾದ ಮಂಡಿಸಿದ್ದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪರ ತುಷಾರ್ ಮೆಹ್ತಾ ವಾದ ಮಂಡನೆ ಮಾಡಿದರು. ದೂರುದಾರರ ಪರ ವಕೀಲರು ಕೂಡ ವಾಡ ಮಂಡನೆ ಮಾಡಿದ್ದಾರೆ. ಸುದೀರ್ಘ ವಾದಮಂಡನೆ ಆಲಿಸಿದ ಹೈಕೋರ್ಟ್ ಏಕಸದಸ್ಯ ಪೀಠ, ಅರ್ಜಿ ವಿಚಾರಣೆಯನ್ನು ಸೆ.2 ಮಧ್ಯಾಹ್ನ 2:30ಕ್ಕೆ ಮುಂದೂಡಿ ಆದೇಶ ಹೊರಡಿಸಿತ್ತು.