HomeKarnatakaBIG NEWS: ಅರಣ್ಯ ಒತ್ತುವರಿ ತೆರವಿಗೆ ಮತ್ತಷ್ಟು ವೇಗ: 3 ಎಕರೆಗಿಂತ ಹೆಚ್ಚಿನ ಅರಣ್ಯ ಒತ್ತುವರಿ...

BIG NEWS: ಅರಣ್ಯ ಒತ್ತುವರಿ ತೆರವಿಗೆ ಮತ್ತಷ್ಟು ವೇಗ: 3 ಎಕರೆಗಿಂತ ಹೆಚ್ಚಿನ ಅರಣ್ಯ ಒತ್ತುವರಿ ತೆರವು, ಫೋಟೋ ಸಹಿತ ವರದಿಗೆ ಸೂಚನೆ

ಬೆಂಗಳೂರು: ಪಶ್ಚಿಮ ಘಟ್ಟ ಅರಣ್ಯ ಪ್ರದೇಶದ 10 ಜಿಲ್ಲೆಗಳ ವ್ಯಾಪ್ತಿಯಲ್ಲಿ ಕಳೆದ ಒಂದು ತಿಂಗಳಿನಿಂದ ಕೈಗೊಂಡಿರುವ ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆಯ ವಲಯವಾರು ಭಾವಚಿತ್ರ ಸಹಿತ ವರದಿ ನೀಡುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ವಲಯ ಅರಣ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಪಶ್ಚಿಮಘಟ್ಟ ಅರಣ್ಯ ಪ್ರದೇಶದಲ್ಲಿ ಅಕ್ರಮ ಒತ್ತುವರಿ ತೆರವಿಗೆ ವೇಗ ನೀಡಲಾಗುತ್ತಿದೆ. ಅರಣ್ಯ ಭೂಮಿ ಒತ್ತುವರಿ ಮಾಡಿ ನಿರ್ಮಿಸಲಾದ ರೆಸಾರ್ಟ್, ಹೋಂ ಸ್ಟೇಗಳು, ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಲ್ಲದ ಕರ್ನಾಟಕ ಅರಣ್ಯ ಕಾಯ್ದೆ ಅಡಿಯಲ್ಲಿ ಪ್ರಕ್ರಿಯೆ ಪೂರ್ಣಗೊಂಡಿರುವ ಒತ್ತುವರಿಗಳನ್ನು ತೆರವು ಮಾಡುವಂತೆ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದ್ದಾರೆ.

ಕಳೆದ ಒಂದು ತಿಂಗಳಿನಿಂದ ನಡೆಸಲಾದ ಒತ್ತುವರಿ ತೆರವಿನ ಸಂಪೂರ್ಣ ವರದಿ ಸಲ್ಲಿಸುವಂತೆ ನಿರ್ದೇಶನ ನೀಡಿದ್ದಾರೆ. ಮೂರು ಎಕರೆಗಿಂತ ಹೆಚ್ಚಿನ ಅರಣ್ಯ ಒತ್ತುವರಿಗಳನ್ನು ಗುರುತಿಸಿ ತೆರವು ಮಾಡುವಂತೆ ಸೂಚನೆ ನೀಡಿದ್ದಾರೆ. ಹೀಗೆ, ಒತ್ತುವರಿ ತೆರವು ಮಾಡುವ ಸಂದರ್ಭದಲ್ಲಿ 30 ಎಕರೆಗಿಂತ ಹೆಚ್ಚಿನ ಒತ್ತುವರಿ, 10 ರಿಂದ 30 ಎಕರೆವರೆಗಿನ ಒತ್ತುವರಿ, 3 ಎಕರೆಯಿಂದ 10 ಎಕರೆವರೆಗಿನ ಒತ್ತುವರಿಯನ್ನು ಗುರುತಿಸಿ ಕಾರ್ಯಾಚರಣೆ ಕೈಗೊಳ್ಳಬೇಕು. ನಿಗದಿತ ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ಕರ್ನಾಟಕ ಅರಣ್ಯ ಕಾಯ್ದೆ ಮತ್ತು ನ್ಯಾಯಾಲಯಗಳಲ್ಲಿ ಪ್ರಕರಣ ದಾಖಲಿದ್ದರೆ ಅದನ್ನು ಶೀಘ್ರ ವಿಲೇವಾರಿಗೆ ಕ್ರಮ ಕೈಗೊಂಡು ಒತ್ತುವರಿ ತೆರವು ಮಾಡಬೇಕು. ಹೀಗೆ ತೆರವುಗೊಳಿಸುವಾಗ 3 ಎಕರೆಗಿಂತ ಕಡಿಮೆ ಒತ್ತುವರಿಯನ್ನು ತೆರೆವು ಮಾಡದಂತೆ ಸಚಿವರು ಸೂಚನೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular