HomeKarnatakaಗಂಡು ಮಗುವಿಗೆ ಜನ್ಮ ನೀಡಿದ ಪಿಎಸ್ಐ ಪರಶುರಾಮ್ ಪತ್ನಿ

ಗಂಡು ಮಗುವಿಗೆ ಜನ್ಮ ನೀಡಿದ ಪಿಎಸ್ಐ ಪರಶುರಾಮ್ ಪತ್ನಿ

ರಾಯಚೂರು: ಯಾದಗಿರಿ ಪಿಎಸ್ಐ ಪರಶುರಾಮ್ ಅವರ ಅನುಮಾನಾಸ್ಪದ ಸಾವಿನಿಂದ ಆಘಾತಕ್ಕೆ ಒಳಗಾಗಿದ್ದ ಕುಟುಂಬದಲ್ಲಿ ಈಗ ಕೊಂಚ ಸಮಾಧಾನ ತಂದಿದೆ. ಪರಶುರಾಮ್ ಅವರ ಪತ್ನಿ ಶ್ವೇತಾ ಅವರಿಗೆ ಸೋಮವಾರ ಯಾದಗಿರಿ ಆಸ್ಪತ್ರೆಯಲ್ಲಿ ಹೆರಿಗೆಯಾಗಿದ್ದು, ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

ಅಗಸ್ಟ್ 2ರಂದು ಪರಶುರಾಮ್ ಮೃತಪಟ್ಟಿದ್ದರು. ಸೆಪ್ಟೆಂಬರ್ 2ರಂದು ಶ್ವೇತಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಪರಶುರಾಮ್ ಮೃತಪಟ್ಟ ದಿನಾಂಕದಂದೇ ಮಗು ಜನಿಸಿರುವುದರಿಂದ ಪರಶುರಾಮ್ ಮತ್ತೆ ಹುಟ್ಟಿ ಬಂದಿದ್ದಾನೆ ಎಂದು ಕುಟುಂಬ ಸದಸ್ಯರು ಸಂತೋಷ ವ್ಯಕ್ತಪಡಿಸಿದ್ದಾರೆ.

ತಾಯಿ, ಮಗು ಆರೋಗ್ಯವಾಗಿದ್ದಾರೆ. ಪರಶುರಾಮ್ ಮೃತಪಟ್ಟ ಸರಿಯಾಗಿ ತಿಂಗಳ ನಂತರ ಅದೇ ದಿನಾಂಕದಂದು ಗಂಡು ಮಗು ಜನಿಸಿದೆ ಎಂದು ಕುಟುಂಬದವರು ಸಂತಸ ವ್ಯಕ್ತಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಯಾದಗಿರಿ ಶಾಸಕ ಮತ್ತು ಅವರ ಪುತ್ರ ಲಂಚಕ್ಕೆ ಬೇಡಿಕೆ ಇಟ್ಟಿರುವುದೇ ಪರಶುರಾಮ್ ಸಾವಿಗೆ ಕಾರಣ ಎಂದು ತುಂಬ ಗರ್ಭಿಣಿಯಾಗಿದ್ದ ಶ್ವೇತಾ ಆರೋಪಿಸಿ ಹೋರಾಟ ನಡೆಸಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular