ಬೆಂಗಳೂರು : ಮುಡಾ ಸಂಕಷ್ಟ ನಿವಾರಣೆಯಾಗಲೆಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿದ ಸಿಎಂ ಸಿದ್ದರಾಮಯ್ಯ ವಿಶೇಷ ಪೂಜೆ ಸಲ್ಲಿಸಿದರು.
ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಇಂದು ಮೈಸೂರಿನ ಚಾಮುಂಡಿಬೆಟ್ಟಕ್ಕೆ ತೆರಳಿ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದೆ. ಈ ವೇಳೆ ನಾಡಿನ ಸಮಸ್ತ ಜನರಿಗೆ ಸುಖ, ಸಮೃದ್ಧಿಯನ್ನು ಕರುಣಿಸೆಂದು ತಾಯಿಯಲ್ಲಿ ಪ್ರಾರ್ಥಿಸಿದೆ ಎಂದು ಟ್ವೀಟ್ ಮಾಡಿದ್ದಾರೆ.
ಈ ಹಿಂದೆಯೂ ಚಾಮುಂಡಿ ಬೆಟ್ಟದ ನಿರ್ವಹಣೆಗೆ ಸಂಬಂಧಿಸಿದಂತೆ ಆಡಳಿತ ಮಂಡಳಿ ಅಸ್ತಿತ್ವದಲ್ಲಿ ಇತ್ತು, ಅದು ಕೂಡ ಸರ್ಕಾರದ ಅಧೀನದಲ್ಲೇ ಇತ್ತು.ಸರ್ಕಾರ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರವನ್ನು ರಚಿಸಿದ ನಂತರ ರಾಜಮಾತೆ ಪ್ರಮೋದಾದೇವಿಯವರು ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದರು. ಆಗಸ್ಟ್ 22 ರಂದು ತಡೆಯಾಜ್ಞೆ ತೆರವುಗೊಂಡಿದೆ. ನ್ಯಾಯಾಲಯದ ತೀರ್ಮಾನದಂತೆ ಈಗ ಕ್ರಮ ತೆಗೆದುಕೊಳ್ಳಲಾಗುತ್ತಿದೆ.
ನಾವು ನ್ಯಾಯಾಲಯದ ಆದೇಶ ಪಾಲನೆ ಮಾಡಬೇಕೋ? ಬಿಜೆಪಿ ಸಂಸದರ ಆದೇಶ ಪಾಲನೆ ಮಾಡಬೇಕೋ? ನ್ಯಾಯಾಲಯದ ಆದೇಶದಂತೆ ನಡೆದರೆ ಹೇಗೆ ಕಾನೂನು ಬಾಹಿರವಾಗುತ್ತದೆ? ಎಂದು ಟ್ವೀಟ್ ಮಾಡಿದ್ದಾರೆ.