HomeKarnatakaಸಾಹಸ ಮೆರೆದ ಬಾಲಕ - ಬಾಲಕಿಯರಿಂದ ʼಹೊಯ್ಸಳʼ ಮತ್ತು ʼಕೆಳದಿ ಚೆನ್ನಮ್ಮʼ ಪ್ರಶಸ್ತಿಗೆ ಅರ್ಜಿ ಆಹ್ವಾನ

ಸಾಹಸ ಮೆರೆದ ಬಾಲಕ – ಬಾಲಕಿಯರಿಂದ ʼಹೊಯ್ಸಳʼ ಮತ್ತು ʼಕೆಳದಿ ಚೆನ್ನಮ್ಮʼ ಪ್ರಶಸ್ತಿಗೆ ಅರ್ಜಿ ಆಹ್ವಾನ

ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಮಕ್ಕಳ ದಿನಾಚರಣೆ-2024ರ ಪ್ರಯುಕ್ತ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಙೆಯಿಮದ ಇತರರ ಪ್ರಾಣ ರಕ್ಷಣೆಗಾಗಿ ಧೈರ್ಯ ಸಾಹಸ ಪ್ರದರ್ಶಿಸಿದ 6 ರಿಂದ 18 ವರ್ಷದೊಳಗಿನ ಬಾಲಕರಿಗೆ “ಹೊಯ್ಸಳ” ಮತ್ತು ಬಾಲಕಿಯರಿಗೆ ‘ಕೆಳದಿ ಚೆನ್ನಮ್ಮ’ ಶೌರ್ಯ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗುತ್ತದೆ, ಪ್ರಕರಣವು 2023ರ ಆಗಸ್ಟ್ 01 ರಿಂದ 2024ರ ಜುಲೈ 31 ರೊಳಗೆ ನಡೆದಿರಬೇಕು. 2006ರ ಆಗಸ್ಟ್ 01 ರಂದು ಹಾಗೂ ನಂತರ ಜನಿಸಿದ ಮಕ್ಕಳು ಈ ಪ್ರಶಸ್ತಿಗೆ ಅರ್ಹರಾಗಿರುತ್ತಾರೆ. ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳಿಗೆ ತಲಾ ರೂ.10,000/- ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಒಳಗೊಂಡಿರುತ್ತದೆ.

ಇದೇ ಸಂದರ್ಭದಲ್ಲಿ ಮಕ್ಕಳ ಕ್ಷೇತ್ರದಲ್ಲಿ ಕನಿಷ್ಠ 05 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ ತಲಾ ರೂ.25,000/- ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಹಾಗೂ ಸಂಸ್ಥೆಗಳಿಗೆ ತಲಾ ರೂ.1,00,000/- ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಲಾಗುವುದು.

ಮಕ್ಕಳ ದಿನಾಚರಣೆ-2024 ಸಾಲಿನ ಪ್ರಶಸ್ತಿಗಾಗಿ ನಿಗದಿಪಡಿಸಿರುವ ಅರ್ಜಿ ನಮೂನೆಗಳನ್ನು ಸಂಬಂಧಿಸಿದ ಜಿಲ್ಲೆಯ ಉಪನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರಿಂದ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಸಂಬಂಧಪಟ್ಟ ಜಿಲ್ಲಾ ಉಪನಿರ್ದೇಶಕರ ಕಚೇರಿಗೆ ಸೆಪ್ಟೆಂಬರ್ 27 ರೊಳಗೆ ಸಲ್ಲಿಸತಕ್ಕದ್ದು, ಅರ್ಜಿಗಳು ಕನ್ನಡ ಭಾಷೆಯಲ್ಲಿಯೇ ಸಲ್ಲಿತಕ್ಕದ್ದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular