HomeKarnatakaಆರೋಗ್ಯವಾಗಿದ್ದೇನೆ: ಆತಂಕಬೇಡ ಎಂದ ಮಾಜಿ ಸಚಿವ ಸುರೇಶ್ ಕುಮಾರ್

ಆರೋಗ್ಯವಾಗಿದ್ದೇನೆ: ಆತಂಕಬೇಡ ಎಂದ ಮಾಜಿ ಸಚಿವ ಸುರೇಶ್ ಕುಮಾರ್

ಬೆಂಗಳೂರು: ನಾನು ಆರೋಗ್ಯವಾಗಿದ್ದೇನೆ. ಅನಗತ್ಯ ವದಂತಿಗಳನ್ನು ನಂಬುವುದು ಬೇಡ ಎಂದು ಮಾಜಿ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.

ಮಾಧ್ಯಮಗಳಲ್ಲಿ ತಮ್ಮ‌ ಅನಾರೋಗ್ಯ ಕುರಿತಂತೆ ಕೆಲ ವದಂತಿಗಳು ಪ್ರಸಾರವಾಗುತ್ತಿರುವ ಹಿನ್ನೆಲೆಯಲ್ಲಿ ಸ್ವತ: ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದು, ನಾನು ನಾನು ಆರೋಗ್ಯವಾಗಿದ್ದೇನೆ ಎಂದಿದ್ದಾರೆ.

ಈ ಕುರಿತಂತೆ ಮಾಧ್ಯಮ ಪ್ರಕಟಣೆಯನ್ನು ಬಿಡುಗಡೆ ಮಾಡಿರುವ ಅವರು, ಚಿಕೂನ್ ಗುನ್ಯಾ ತಮ್ಮನ್ನು ಕೆಲ ದಿನಗಳಿಂದ ಬಾಧಿಸಿದ್ದು, ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದೇನೆ. ಜ್ವರದಿಂದ ಈಗ ಸಂಪೂರ್ಣ ಚೇತರಿಕೆ‌ ಕಂಡಿದ್ದು, ಗುಣಮುಖನಾಗಿದ್ದೇನೆ ಹಾಗೂ ಸದ್ಯಕ್ಕೆ ವಿಶ್ರಾಂತಿಯಲ್ಲಿದ್ದೇನೆ.‌ ಕಾಳಜಿ ಹೊಂದಿರುವ ತಮ್ಮ ಹಿತೈಶಿಗಳು ಅನಗತ್ಯ ಆತಂಕಕ್ಕೆ ಒಳಗಾಗುವುದು ಬೇಡ‌ ಎಂದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular