ಬೆಂಗಳೂರು : ಅರಣ್ಯಾಧಿಕಾರಿಗಳೂ ನಿಷ್ಠುರವಾಗಿ ಅರಣ್ಯ ಒತ್ತುವರಿ ತಡೆಯಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಅರಣ್ಯ ಇಲಾಖೆ ಸಿಬ್ಬಂದಿಗಳಿಗೆ ಪದಕ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ‘ಅರಣ್ಯ ಸಂಪತ್ತಿನ ಸಂರಕ್ಷಣೆಯ ಮಹತ್ವ ಅರಿತಿದ್ದ ಇಂಧಿರಾ ಗಾಂಧಿಯವರು ಅರಣ್ಯ ಸಂರಕ್ಷಣಾ ಕಾಯ್ದೆ ಜಾರಿಗೆ ತಂದರು. ಈ ಕಾಯ್ದೆ ಅತ್ಯಂತ ನಿಷ್ಠುರವಾಗಿದೆ. ಅರಣ್ಯಾಧಿಕಾರಿಗಳೂ ಅಷ್ಟೇ ನಿಷ್ಠುರವಾಗಿ ಅರಣ್ಯ ಒತ್ತುವರಿ ತಡೆಯಬೇಕು. ಕಾಡು ಪ್ರಾಣಿಗಳಿಗೆ ಆಹಾರ, ಮೇವು ಮತ್ತು ನೀರು ಕಾಡಿನ ಒಳಗೇ ಅಗತ್ಯವಿದ್ದಷ್ಟು ದೊರೆತರೆ ಅವು ಕಾಡಿನಿಂದ ಹೊರಗೆ ಬರುವುದಿಲ್ಲ. ಆಗ ಮಾನವ-ಪ್ರಾಣಿ ಸಂಘರ್ಷಕ್ಕೆ ತಡೆ ಬೀಳುತ್ತದೆ ಎಂದರು.
ಪುಣ್ಯಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ನಮ್ಮ ಸರ್ಕಾರ ಪಣ ತೊಟ್ಟಿದೆ : ಸಿಎಂ
ತಾಯಿ ಚಾಮುಂಡೇಶ್ವರಿಯ ದರ್ಶನಕ್ಕಾಗಿ ಬರುವ ಭಕ್ತಾಧಿಗಳಿಗೆ ಉತ್ಕೃಷ್ಟ ಮಟ್ಟದ ಸೇವೆ ಹಾಗೂ ಸೌಲಭ್ಯ ಒದಗಿಸಲು ಹಾಗೂ ಸಿಸಿ ಟಿವಿ, ಬೀದಿ ದೀಪ ಅಳವಡಿಕೆ, ನೈರ್ಮಲ್ಯ ಕಾಪಾಡುವುದು ಸೇರಿದಂತೆ ಪುಣ್ಯಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ನಮ್ಮ ಸರ್ಕಾರ ಪಣ ತೊಟ್ಟಿದೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.