HomeKarnatakaಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಶುಭ ಸುದ್ದಿ: ಸರ್ಕಾರಿ, ಖಾಸಗಿ ಕಂಪನಿಗಳಲ್ಲಿ ಉದ್ಯೋಗ

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಶುಭ ಸುದ್ದಿ: ಸರ್ಕಾರಿ, ಖಾಸಗಿ ಕಂಪನಿಗಳಲ್ಲಿ ಉದ್ಯೋಗ

ದಾವಣಗೆರೆ: ಶಿಶುಕ್ಷು ತರಬೇತಿ ಸಂಸ್ಥೆ, ಚೆನ್ನೈ(ದಕ್ಷಿಣ ವಲಯ) ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ, ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ನಗರದ ವಿವೇಕಾನಂದ ಬಡಾವಣೆಯಲ್ಲಿರುವ ಬಾಪೂಜಿ ಪಾಲಿಟೆಕ್ನಿಕ್‍ನಲ್ಲಿ ಸೆ.12 ರ ಬೆಳಗ್ಗೆ 9.30ಕ್ಕೆ ನೇರ ಸಂದರ್ಶನದಲ್ಲಿ ಅಪ್ರೆಂಟಿಶಿಪ್ ಮೇಳ ಹಾಗೂ ಉದ್ಯೋಗ ಮೇಳ ಏರ್ಪಡಿಸಲಾಗಿದೆ.

ಸರ್ಕಾರಿ ಕಂಪನಿಗಳು ಮತ್ತು ಬಹು ರಾಷ್ಟ್ರೀಯ ಕಂಪನಿಗಳು ಈ ಮೇಳದಲ್ಲಿ ಭಾಗವಹಿಸಿ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆದ್ದರಿಂದ 2020 -2021, 2022, 2023 ಮತ್ತು 2024 ಸಾಲಿನಲ್ಲಿ ತೇರ್ಗಡೆ ಹೊಂದಿದ ಯಾವುದೇ ವಿಭಾಗದ(ಟೆಕ್ನಿಕಲ್ ಅಂಡ್ ನಾನ್ ಟೆಕ್ನಿಕಲ್) ಇಂಜಿನಿಯರಿಂಗ್ ಮತ್ತು ಡಿಪ್ಲೊಮಾ ಅಭ್ಯರ್ಥಿಗಳು ಹಾಗೂ ಬಿಎ, ಬಿಎಸ್ಸಿ, ಬಿಕಾಂ, ಬಿಬಿಎ ಮತ್ತು ಬಿಸಿಎ ಪದವಿ ಪಡೆದ ಅಭ್ಯರ್ಥಿಗಳು ಈ ಮೇಳದಲ್ಲಿ ಭಾಗವಹಿಸಬಹುದು.

ಅಭ್ಯರ್ಥಿಗಳು ಬಯೋಡೇಟಾ ಮೂರು ಸೆಟ್‍ಗಳು ತರಬೇಕು. ಹೆಚ್ಚಿನ ಮಾಹಿತಿಗಾಗಿ ವೆಬೈಟ್: www.boat-srp.com-Home page -News & Events section.. ವೀಕ್ಷಿಸಬಹುದು. ಹಾಗೂ ದೂ.ಸಂ: 9945251906 , 9916013954 ಸಂಪರ್ಕಿಸಬಹುದು. NATS Portal (https://nats.education.gov.in & Google Form Link: (https://forms.gle/jkCKDErejAWsqbt69))   ನ್ಯಾಟ್ಸ್ ಪೋರ್ಟಲ್, ಗೂಗಲ್ ಫಾರಂ ಲಿಂಕ್ ಅನ್ನು ಬಳಸಿ ನೋಂದಾಯಿಸಿ ಪ್ರಿಂಟ್ ಕಾಪಿಯನ್ನು ಕಡ್ಡಾಯವಾಗಿ ತರಬೇಕು ಎಂದು ಕಾಲೇಜಿನ ಪ್ರಾಂಶುಪಾಲರಾದ ಪುಷ್ಪಾಲತಾ ನಾಡೀಗ್ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular