ಮಂಡ್ಯ: ಇದ್ದಕ್ಕಿದ್ದಂತೆ ಮನೆ ಗೋಡೆ ಕುಸಿದು ಬಿದ್ದು ಮಹಿಳೆ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟನ ತಾಲೂಕಿನ ನೆಲಮನೆ ಗ್ರಾಮದಲ್ಲಿ ನಡೆದಿದೆ.
ಶಾಂತಮ್ಮ (45) ಮೃತ ಮಹಿಳೆ. ನಾಲೆಯಲ್ಲಿ ಪಾತ್ರೆ ತೊಳೆಯುತ್ತಿದ್ದ ವೇಳೆ ಬಾಬು ಎಂಬುವವರ ಮನೆ ಗೋಡೆ ಏಕಾಏಕಿ ಕುಸಿದುಬಿದ್ದಿದೆ. ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿದ ಶಾಂತಮ್ಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಘಟನಾ ಸ್ಥಳಕ್ಕೆ ಆರ್ ಐ ಭಾಸ್ಕರ್ ಹಾಗೂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.