HomeKarnatakaBREAKING: ಈಡೇರಿದ ಸಹಾಯಕ ಪ್ರಾಧ್ಯಾಪಕ ಹುದ್ದೆ ಆಕಾಂಕ್ಷಿಗಳ ಬಹುದಿನದ ಕನಸು: ನೇಮಕಾತಿ ಆದೇಶ ನೀಡಿದ ಸಿಎಂ

BREAKING: ಈಡೇರಿದ ಸಹಾಯಕ ಪ್ರಾಧ್ಯಾಪಕ ಹುದ್ದೆ ಆಕಾಂಕ್ಷಿಗಳ ಬಹುದಿನದ ಕನಸು: ನೇಮಕಾತಿ ಆದೇಶ ನೀಡಿದ ಸಿಎಂ

ಬೆಂಗಳೂರು: ಸಹಾಯಕ ಪ್ರಾಧ್ಯಾಪಕ ಹುದ್ದೆಯ ಆಕಾಂಕ್ಷಿಗಳ ಬಹುದಿನಗಳ ಕನಸು ಈಡೇರಿದೆ. ಹಲವು ವರ್ಷಗಳಿಂದ ನ್ಯಾಯಾಲಯದಲ್ಲಿದ್ದ ಕಾರಣ ನೆನೆಗುದಿಗೆ ಬಿದ್ದಿದ್ದ 1242 ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಇದ್ದ ತೊಡಕುಗಳನ್ನು ಕಾನೂನಿನ ಚೌಕಟ್ಟಿನಲ್ಲಿ ಬಗೆಹರಿಸಲಾಗಿದೆ.

ಕ್ಷಿಪ್ರಗತಿಯಲ್ಲಿ ದಾಖಲೆಗಳ ಪರಿಶೀಲನೆ ಸೇರಿದಂತೆ ಹಲವು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಸಮ್ಮುಖದಲ್ಲಿ ಗೆಜೆಟ್ ರೂಪದಲ್ಲಿ ನೇಮಕಾತಿ ಆದೇಶ ನೀಡಲಾಯಿತು.

ಈ ಸಂದರ್ಭದಲ್ಲಿ ಹಲವು ವರ್ಷಗಳಿಂದ ಕಾತುರದಿಂದ ಕಾಯುತ್ತಿದ್ದ ಆಕಾಂಕ್ಷಿಗಳ ಮುಖದಲ್ಲಿ ನೋಡಿದ ಸಂತೋಷ ನಿಜಕ್ಕೂ ಸಾರ್ಥಕತೆಯ ಭಾವನೆ ಮೂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್, ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಶಾಸಕರಾದ ರಿಜ್ವಾನ್ ಅರ್ಷದ್, ಪುಟ್ಟಣ್ಣ ಮೊದಲಾದವರಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular