ಬೆಂಗಳೂರು: ಮುಂದಿನ ಸಚಿವ ಸಂಪುಟ ಸಭೆಯನ್ನು ಕಲಬುರಗಿಯಲ್ಲಿ ನಡೆಸಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಲಬುರಗಿಯಲ್ಲಿ ಸಂಪುಟ ಸಭೆ ನಡೆಸಲು ಒಪ್ಪಿಗೆ ನೀಡಿದ್ದಾರೆ.
ಮಾಧ್ಯಮ ಪ್ರಕಟಣೆಯ ಮೂಲಕ ಸಚಿವ ಪ್ರಿಯಾಂಕ್ ಖರ್ಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಸಂಬಂಧ ಕಲಬುರಗಿಯಲ್ಲಿ ಸಂಪುಟ ಸಭೆ ನಡೆಸಲಾಗುವುದು. ಮುಖ್ಯಮಂತ್ರಿ ಸೇರಿದಂತೆ ಎಲ್ಲಾ ಸಚಿವರು ಕಲಬುರಗಿಯಲ್ಲಿ ಸಂಪುಟ ಸಭೆ ನಡೆಸಲು ಒಪ್ಪಿಗೆ ನೀಡಿದ್ದಾರೆ.
ಕಲ್ಯಾಣ ಕರ್ನಾಟಕದ ಅಭಿವೃದ್ಧಿ, ಕೈಗೊಳ್ಳಬೇಕಿರುವ ಜನಪರ ಕೆಲಸಗಳ ಬಗ್ಗೆ ಸಭೆಯಲ್ಲಿ ಸಮಗ್ರವಾಗಿ ಚರ್ಚಿಸುವ ಉದ್ದೇಶದಿಂದ ಮುಂದಿನ ಸಂಪುಟ ಸಭೆ ಕಲಬುರಗಿಯಲ್ಲಿ ನಿಗದಿಯಾಗಿದೆ. ಸಚಿವ ಪ್ರಿಯಾಂಕ್ ಖರ್ಗೆ ಅವರ ಮನವಿ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿಗೆ ನೀಡಿದ್ದಾರೆ.