alex Certify ಸಾರ್ವಜನಿಕ ಗಣೇಶೋತ್ಸವದಲ್ಲಿ ಈ ಸುರಕ್ಷತಾ ಕ್ರಮ ಪಾಲಿಸಲು ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಾರ್ವಜನಿಕ ಗಣೇಶೋತ್ಸವದಲ್ಲಿ ಈ ಸುರಕ್ಷತಾ ಕ್ರಮ ಪಾಲಿಸಲು ಸೂಚನೆ

ಸಾರ್ವಜನಿಕರು ಗಣೇಶೋತ್ಸವದ ವೇಳೆ ಸುರಕ್ಷತೆಗೂ ಕಾಳಜಿ ವಹಿಸಬೇಕು. ಮೂರ್ತಿ ಪ್ರತಿಷ್ಠಾಪನೆ ಮತ್ತು ವಿಸರ್ಜನೆ ವೇಳೆ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳನ್ನು ಸೂಚಿಸಿದ್ದು, ತಪ್ಪದೇ ಪಾಲಿಸುವ ಮೂಲಕ ವಿದ್ಯುತ್‌ ಅವಘಡಗಳನ್ನು ತಪ್ಪಿಸಬೇಕು ಎಂದು ಬೆಸ್ಕಾಂ ಮನವಿ ಮಾಡಿದೆ.

ಸಾರ್ವಜನಿಕ ಗಣೇಶೋತ್ಸವದಲ್ಲಿ ಪಾಲಿಸಬೇಕಾದ ಸುರಕ್ಷತಾ ಕ್ರಮಗಳು

ಹಬ್ಬಕ್ಕೆ ತೋರಣ, ಪೆಂಡಾಲ್, ಸೀರಿಯಲ್ ಲೈಟ್‌ಗಳನ್ನು ಅಳವಡಿಸುವ ಮುನ್ನ ವಿದ್ಯುತ್ ತಂತಿಗಳ ಬಗ್ಗೆ ಗಮನವಿರಲಿ.

ಸೀರಿಯಲ್ ಲೈಟ್ ತಂತಿಗಳು ಸಮರ್ಪಕವಾಗಿ ಇನ್ಸುಲೇಟ್ ಆಗಿವೆಯೇ ಎಂದು ಪರೀಕ್ಷಿಸಿಕೊಳ್ಳಿ.

ಸೀರಿಯಲ್ ಲೈಟ್ ಹಾಗೂ ದೀಪಗಳನ್ನು ಹಾಕುವಾಗ ವಿದ್ಯುತ್ ಕಂಬದಿಂದ ಸಂಪರ್ಕ ಪಡೆಯಬಾರದು.

ವಿದ್ಯುತ್ ತಂತಿ, ವಿದ್ಯುತ್ ಕಂಬ ಅಥವಾ ಪರಿವರ್ತಕ ಕೇಂದ್ರಗಳಿಗೆ ಚಪ್ಪರ, ಶಾಮಿಯಾನ ಕಟ್ಟಬಾರದು.

ಗಣೇಶ ಮೂರ್ತಿಯ ಮೆರವಣಿಗೆ ವೇಳೆ ರಸ್ತೆ ಬದಿಯ ವಿದ್ಯುತ್ ಮಾರ್ಗಗಳ ಬಗ್ಗೆ ಎಚ್ಚರವಿರಬೇಕು. ವಿದ್ಯುತ್ ತಂತಿಗಳನ್ನು ಮೇಲಕ್ಕೆ ಎತ್ತುವ ಪ್ರಯತ್ನ ಮಾಡಬಾರದು.

ಮೆರವಣಿಗೆ ಮಾರ್ಗವನ್ನು ಮುಂಚಿತವಾಗಿ ಬೆಸ್ಕಾಂನ ಆಯಾ ಉಪ ವಿಭಾಗದ ಅಧಿಕಾರಿಗಳ ಗಮನಕ್ಕೆ ತಂದರೆ, ಅವರು ಅಗತ್ಯ ನೆರವು ಒದಗಿಸುತ್ತಾರೆ.

ತುಂಡಾದ ತಂತಿ, ವಿದ್ಯುತ್ ಕಿಡಿ ಗಮನಕ್ಕೆ ಬಂದರೆ 1912 ಸಹಾಯವಾಣಿಗೆ ಕರೆ ಮಾಡಿ.

ವಿದ್ಯುತ್ ಪರಿಕರಗಳು ಇರುವ ಸ್ಥಳಗಳಲ್ಲಿ ‘ಅಪಾಯ ವಲಯ’ ಎ೦ದು ಸೂಚಿಸಬೇಕು.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...