HomeKarnatakaಚಿಕ್ಕ ಮಕ್ಕಳ ಪೋಷಕರಿಗೆ ಎಚ್ಚರಿಕೆ: ಜ್ಯೂಸ್ ಬಾಟಲ್ ಮುಚ್ಚಳ ನುಂಗಿ ಮಗು ಸಾವು

ಚಿಕ್ಕ ಮಕ್ಕಳ ಪೋಷಕರಿಗೆ ಎಚ್ಚರಿಕೆ: ಜ್ಯೂಸ್ ಬಾಟಲ್ ಮುಚ್ಚಳ ನುಂಗಿ ಮಗು ಸಾವು

ಶಿವಮೊಗ್ಗ: ಜ್ಯೂಸ್ ಬಾಟಲ್ ಮುಚ್ಚಳ ನುಂಗಿ ಪುಟ್ಟ ಮಗು ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಹರಗುವಳ್ಳಿ ಗ್ರಾಮದಲ್ಲಿ ನಡೆದಿದೆ.

ಜ್ಯೂಸ್ ಬಾಟಲ್ ನೊಂದಿಗೆ ಆಟವಾಡುತ್ತಿದ್ದ ಪುಟ್ಟ ಮಗು ಆಕಸ್ಮಿಕವಾಗಿ ಮುಚ್ಚಳವನ್ನು ಬಾಯಿಗೆ ಹಾಕಿಕೊಂಡಿದೆ. ಅದು ಗಂಟಲಲ್ಲಿ ಸಿಲುಕಿದ ಪರಿಣಾಮ ಉಸಿರಾಟ ಸಾಧ್ಯವಾಗದೆ ಮೃತಪಟ್ಟಿದೆ. ಹರಗುವಳ್ಳಿ ಗ್ರಾಮದ ವೇದಮೂರ್ತಿ ಗಂಗಾಧರ ಶಾಸ್ತ್ರಿ -ಅನುಷಾ ಅವರ ಒಂದೂವರೆ ವರ್ಷದ ಪುತ್ರ ನಂದೀಶ್ ಮೃತಪಟ್ಟ ಮಗು.

ಮುಚ್ಚಳ ಹಿಡಿದುಕೊಂಡು ಆಟವಾಡುತ್ತಿದ್ದ ಮಗು ಆಕಸ್ಮಿಕವಾಗಿ ಅದನ್ನು ಬಾಯಿಗೆ ಹಾಕಿಕೊಂಡಿದ್ದು, ಗಂಟಲಲ್ಲಿ ಮುಚ್ಚಳ ಸಿಲುಕಿದೆ. ಕೂಡಲೇ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಮಾರ್ಗಮಧ್ಯೆ ಮೃತಪಟ್ಟಿದೆ. ಕಂದನ ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular