alex Certify BIG NEWS: ಗ್ರೂಪ್ ಬಿ, ಸಿ ಹುದ್ದೆ ಗರಿಷ್ಠ ವಯೋಮಿತಿ 3 ವರ್ಷ ಹೆಚ್ಚಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಗ್ರೂಪ್ ಬಿ, ಸಿ ಹುದ್ದೆ ಗರಿಷ್ಠ ವಯೋಮಿತಿ 3 ವರ್ಷ ಹೆಚ್ಚಳ

ಬೆಂಗಳೂರು: ರಾಜ್ಯ ಸಿವಿಲ್ ಸೇವೆಗಳಲ್ಲಿನ ವಿವಿಧ ಇಲಾಖೆಗಳ ಗ್ರೂಪ್ ಬಿ ಮತ್ತು ಸಿ ಹುದ್ದೆಗಳಿಗೆ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಒಂದು ಸಲದ ಕ್ರಮವಾಗಿ ಗರಿಷ್ಠ ವಯೋಮಿತಿಯನ್ನು ಮೂರು ವರ್ಷದವರೆಗೆ ಹೆಚ್ಚಳ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ರಾಜ್ಯ ಸಿವಿಲ್ ಸೇವೆಗಳಲ್ಲಿನ ವಿವಿಧ ಇಲಾಖೆಗಳ ಗ್ರೂಪ್ ಬಿ, ಸಿ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿಗೆ ಈಗಾಗಲೇ ಅಧಿಸೂಚನೆ ಹೊರಡಿಸಲಾಗಿದೆ. ಹಾಗೆಯೇ ರಾಜ್ಯ ಸಿವಿಲ್ ಸೇವೆಗಳಲ್ಲಿನ ಗ್ರೂಪ್ ಸಿ ಹುದ್ದೆಗೆ ಮುಂದಿನ ಒಂದು ವರ್ಷದಲ್ಲಿ ಹೊರಡಿಸಲಿರುವ ಅಧಿಸೂಚನೆಯಲ್ಲಿ ಈಗಿರುವ ನಿಯಮಗಳ ಮೇಲೆ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ ಗರಿಷ್ಠ ವಯೋಮಿತಿಯನ್ನು ಮೂರು ವರ್ಷಗಳಿಗೆ ಹೆಚ್ಚಳ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...