HomeKarnatakaBREAKING: ಪಾದಚಾರಿಗಳಿಗೆ ಬೈಕ್ ಡಿಕ್ಕಿ: ಮೂವರು ದುರ್ಮರಣ

BREAKING: ಪಾದಚಾರಿಗಳಿಗೆ ಬೈಕ್ ಡಿಕ್ಕಿ: ಮೂವರು ದುರ್ಮರಣ

ವಿಜಯಪುರ: ಪಾದಚಾರಿಗಳಿಗೆ ಬೈಕ್ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಕುಂಟೋಜಿಯಲ್ಲಿ ನಡೆದಿದೆ.

ಬೈಕ್ ಸವಾರ, ಹಿಂಬದಿ ಸವಾರ, ರಸ್ತೆ ಬದಿ ನಿಂತಿದ್ದ ಯುವಕ ಸಾವನ್ನಪ್ಪಿದ್ದಾರೆ. ತಾಳಿಕೋಟೆ ತಾಲೂಕಿನ ಗೋಟಖಂಡಕಿ ನಿವಾಸಿ ನಿಂಗರಾಜ ಚೌದರಿ(32), ದೇವರಹಿಪ್ಪರಗಿ ತಾಲೂಕಿನ ಹಂಚಲಿ ನಿವಾಸಿ ಅನಿಲ್ ಕೈನೂರ(23) ಮಲಗಲದಿನ್ನಿ ಗ್ರಾಮದ ನಿವಾಸಿ ಉದಯಕುಮಾರ ಪ್ಯಾಟಿ(19) ಮೃತಪಟ್ಟವರು ಎನ್ನಲಾಗಿದೆ.

ಮಲಗಲದಿನ್ನಿ ಗ್ರಾಮದ ಮತ್ತೊಬ್ಬನ ಸ್ಥಿತಿ ಗಂಭೀರವಾಗಿದ್ದು, ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular