HomeKarnatakaBREAKING : ಸ್ಯಾಂಡಲ್’ವುಡ್ ನಿರ್ದೇಶಕ ನಾಗಶೇಖರ್ ಕಾರು ಅಪಘಾತ , ಓರ್ವ ಮಹಿಳೆಗೆ ಗಂಭೀರ ಗಾಯ.!

BREAKING : ಸ್ಯಾಂಡಲ್’ವುಡ್ ನಿರ್ದೇಶಕ ನಾಗಶೇಖರ್ ಕಾರು ಅಪಘಾತ , ಓರ್ವ ಮಹಿಳೆಗೆ ಗಂಭೀರ ಗಾಯ.!

ಬೆಂಗಳೂರು : ಸ್ಯಾಂಡಲ್ವುಡ್ ನಿರ್ದೇಶಕ ನಾಗಶೇಖರ್ ಕಾರು ಅಪಘಾತಕ್ಕೀಡಾದ ಘಟನೆ ಜ್ಞಾನಭಾರತಿ ಕ್ಯಾಂಪಸ್ನಲ್ಲಿ ನಡೆದಿದೆ. ಅಪಘಾತದಲ್ಲಿ ಓರ್ವ ಮಹಿಳೆಗೆ ಗಾಯವಾಗಿದೆ.

ಇಂದು ಮಧ್ಯಾಹ್ನ 1:30ಕ್ಕೆ ಈ ಘಟನೆ ನಡೆದಿದೆ. ನಾಗಶೇಖರ್ ಬೆಂಜ್ ಕಾರು ಡ್ರೈವ್ ಮಾಡಿಕೊಂಡು ಬರುವಾಗ ರಭಸವಾಗಿ ಬಂದು ಮರಕ್ಕೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ, ಓರ್ವ ಮಹಿಳೆಗೆ ಗಾಯವಾಗಿದೆ.

ಅಪಘಾತದ ನಂತರ ಮಹಿಳೆಯನ್ನು ಆಸ್ಪತ್ರೆ ದಾಖಲಿಸಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ನಾಗಶೇಖರ್ಗೆ ಸಣ್ಣ ಪುಟ್ಟ ಗಾಯವಾಗಿದೆ ಎನ್ನಲಾಗ್ತಿದೆ. ಘಟನೆ ನಡೆದ ಸ್ಥಳಕ್ಕೆ ಜ್ಞಾನಭಾರತಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಕಾರನ್ನು ವಶಕ್ಕೆ ಪಡೆದಿದ್ದಾರೆ. ನಾಗಶೇಖರ್ ಮೈನಾ, ಸಂಜು ವೆಡ್ಸ್ ಗೀತಾ, ಅಮರ್ ಸೇರಿದಂತೆ ಹಲವು ಸಿನಿಮಾಗಳಿಗೆ ನಿರ್ದೇಶನ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular