HomeKarnatakaBIG NEWS: ರಾಜ್ಯದಲ್ಲಿ ಹೊಸ ಜೈವಿಕ ತಂತ್ರಜ್ಞಾನ ನೀತಿ ಪ್ರಕಟ: 30 ಸಾವಿರ ಉದ್ಯೋಗ ಸೃಷ್ಟಿ

BIG NEWS: ರಾಜ್ಯದಲ್ಲಿ ಹೊಸ ಜೈವಿಕ ತಂತ್ರಜ್ಞಾನ ನೀತಿ ಪ್ರಕಟ: 30 ಸಾವಿರ ಉದ್ಯೋಗ ಸೃಷ್ಟಿ

ಬೆಂಗಳೂರು: ರಾಜ್ಯವನ್ನು ಜಾಗತಿಕ ಜೈವಿಕ ತಂತ್ರಜ್ಞಾನ ಉತ್ಪಾದನಾ ಕೇಂದ್ರವನ್ನಾಗಿಸುವ ಗುರಿ ಹೊಂದಲಾಗಿದ್ದು, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ 2024 -29 ನೇ ಸಾಲಿನ ಜೈವಿಕ ತಂತ್ರಜ್ಞಾನ ನೀತಿಯನ್ನು ಪ್ರಕಟಿಸಿದೆ.

ಇದರೊಂದಿಗೆ 2029ರ ವೇಳೆಗೆ ಜೈವಿಕ ತಂತ್ರಜ್ಞಾನ(ಬಿ.ಟಿ.) ಕ್ಷೇತ್ರದಲ್ಲಿ 30,000 ಉದ್ಯೋಗ ಸೃಷ್ಟಿ, 20,000 ಜನರಿಗೆ ವಿಶೇಷ ಕೌಶಲ್ಯ ತರಬೇತಿ ನೀಡುವ ಗುರಿ ಹೊಂದಲಾಗಿದೆ. ರಾಜ್ಯದ ಜೈವಿಕ ತಂತ್ರಜ್ಞಾನ ಕ್ಷೇತ್ರಕ್ಕೆ ಹೊಸ ನವೋದ್ಯಮ, ಸೂಕ್ಷ್ಮ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಪ್ರವೇಶಕ್ಕೆ ಉತ್ತೇಜನ ನೀಡುವುದು ಸೇರಿದಂತೆ ಅನೇಕ ಅಂಶಗಳನ್ನು ಒಳಗೊಂಡಿರುವ ಬಿ.ಟಿ. ನೀತಿ 2024- 29 ಸಿದ್ಧಪಡಿಸಲಾಗಿದೆ.

50 ನವೀನ ಸಂಸ್ಥೆಗಳು ಸೇರಿ 300 ಜೈವಿಕ ತಂತ್ರಜ್ಞಾನ ಕಂಪನಿಗಳನ್ನು ರಚಿಸುವಂತೆ ಮಾಡುವುದು, 30,000 ಉದ್ಯೋಗ ಸೃಷ್ಟಿಸಿ, 20,000 ಜನರಿಗೆ ವಿಶೇಷ ಕೌಶಲ್ಯ ತರಬೇತಿ ನೀಡಲು 200ಕ್ಕೂ ಹೆಚ್ಚು ಸಂಸ್ಥೆಗಳೊಂದಿಗೆ ಪಾಲುದಾರಿಕೆ ಹೊಂದುವ ಗುರಿಯನ್ನು ಈ ನೀತಿ ಹೊಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ನೀತಿ ಅಡಿಯಲ್ಲಿ ನವೋದ್ಯಮಗಳಿಗೆ ರಾಜ್ಯ ಜಿಎಸ್​ಟಿ, ಮಾರುಕಟ್ಟೆ ವೆಚ್ಚ, ಪೇಟೆಂಟ್ ವೆಚ್ಚ, ಗುಣಮಟ್ಟ ಪ್ರಮಾಣಿಕರಣ ವೆಚ್ಚ ಮರುಪಾವತಿ ನೀಡುವುದಾಗಿ ಘೋಷಿಸಲಾಗಿದೆ.

ಸೂಕ್ಷ್ಮ ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ, ದೊಡ್ಡ ಕೈಗಾರಿಕೆಗಳಿಗೆ ಮಾರುಕಟ್ಟೆ ವೆಚ್ಚ, ಗುಣಮಟ್ಟ ಪ್ರಮಾಣೀಕರಣ ವೆಚ್ಚ, ಬಡ್ಡಿ ಸಬ್ಸಿಡಿ, ಸ್ಟ್ಯಾಂಪ್ ಡ್ಯೂಟಿ ವಿನಾಯಿತಿ, ಭೂ ಪರಿವರ್ತನೆ ಶುಲ್ಕ, ವಿದ್ಯುತ್ ದರ ರಿಯಾಯಿತಿ ನೀಡುವ ಬಗ್ಗೆ ಉಲ್ಲೇಖಿಸಲಾಗಿದೆ. ಹೂಡಿಕೆಯನ್ನು ಆಕರ್ಷಿಸಲು ಜೈವಿಕ ತಂತ್ರಜ್ಞಾನ ನಿಯಮಗಳನ್ನು ಸರಳಗೊಳಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular