ವಿಜಯಪುರ: ಘನ ಗುರುಸಿದ್ದೇಶ್ವರ ಜಾತ್ರಾ ಮಹೋತ್ಸವದ ವೇಳೆ ದುರಂತ ಸಂಭವಿಸಿದ್ದು, ರಥದ ಚಕ್ರಕ್ಕೆ ಸಿಲುಕಿ ಯುವಕ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಬಿಬಿ ಇಂಗಳಗಿ ಗ್ರಾಮದಲ್ಲಿ ನಡೆದಿದೆ.
ದೇವೇಂದ್ರ ಬಡಿಗೇರ್ (24) ಮೃತ ಯುವಕ. ಜಾತ್ರಾಮಹೋತ್ಸವದಲ್ಲಿ ರಥ ಎಳೆಯುವ ವೇಳೆ ಯುವಕ ಆಯತಪ್ಪಿ ಬಿದ್ದಿದ್ದು, ಈ ವೇಳೆ ರಥದ ಚಕ್ರಕ್ಕೆ ಸಿಲುಕಿದ್ದಾನೆ. ತಕ್ಷಣ ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಮಾರ್ಗಮಧ್ಯೆಯೇ ಆತ ಉಸಿರು ಚೆಲ್ಲಿದ್ದ ಎಂದು ತಿಳಿದುಬಂದಿದೆ.
ಕಲಕೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.