HomeKarnatakaBIG NEWS: ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು 'KSRTC' ಬಸ್ ಚಾಲಕ ಆತ್ಮಹತ್ಯೆ..!

BIG NEWS: ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ‘KSRTC’ ಬಸ್ ಚಾಲಕ ಆತ್ಮಹತ್ಯೆ..!

ಬಾಗಲಕೋಟೆ: ಮೇಲಧಿಕಾರಿ ಕಿರುಕುಳಕ್ಕೆ ಬೇಸತ್ತು ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಾಗಲಕೋಟೆಯ ಬೀಳಗಿಯಲ್ಲಿ ನಡೆದಿದೆ.

ಶ್ರೀಶೈಲ್ ವಿಭೂತಿ (45) ಆತ್ಮಹತ್ಯೆಗೆ ಶರಣಾದವರು. ಶ್ರೀಶೈಲ್ ವಿಭೂತಿ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ ಕಂ ನಿರ್ವಾಹಕರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಡೊಪೋ ಮ್ಯಾನೇಜರ್ ಹಾಗೂ ಜಿಲ್ಲಾ ಕಂಟ್ರೋಲರ್ ಕಿರುಕುಳಕ್ಕೆ ಬೇಸತ್ತು ಶ್ರೀಶೈಲ್ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಬೀಳಗಿಯಲ್ಲಿನ ತಮ್ಮ ಮನೆಯಲ್ಲಿಯೇ ನೇಣಿಗೆ ಕೊರಳೊಡ್ಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೀಳಗಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular