HomeKarnatakaಪತ್ನಿ ಕಣ್ಣೆದುರೇ ಪತಿಯನ್ನು ಬರ್ಬರವಾಗಿ ಕೊಲೆಗೈದ ದುಷ್ಕರ್ಮಿಗಳು

ಪತ್ನಿ ಕಣ್ಣೆದುರೇ ಪತಿಯನ್ನು ಬರ್ಬರವಾಗಿ ಕೊಲೆಗೈದ ದುಷ್ಕರ್ಮಿಗಳು

ಕಲಬುರಗಿ: ಪತ್ನಿ ಎದುರಲ್ಲೇ ಪತಿಯನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ಕಲಬುರಗಿ ತಾಲೂಕಿನ ಕೆಸರೆಟಗಿ ಗ್ರಾಮದಲ್ಲಿ ನಡೆದಿದೆ.

ಕಪಿಲ್ ಗಾಯಕ್ವಾಡ್ (37) ಕೊಲೆಯಾದ ವ್ಯಕ್ತಿ. ಸೆಂಟ್ರಿಂಗ್ ಕೆಲಸ ಮುಗಿಸಿಕೊಂಡು ಪತ್ನಿ ಭಾಗ್ಯಾ ಜೊತೆ ಮನೆಗೆ ತೆರಳುತ್ತಿದ್ದ ವೇಳೆ ಕಪಿಲ್ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ.

ಕೆಸರೆಟಗಿ ಬಳಿಯ ರೈಲ್ವೆ ಬ್ರಿಡ್ಜ್ ಬಳಿ ದುಷ್ಕರ್ಮಿಗಳು ಕಪಿಲ್ ನನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಹೊಡೆದು ಕೊಲೆಗೈದು ಪರಾರಿಯಾಗಿದ್ದಾರೆ. ಗುಲಬುರ್ಗಾ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular